ಬೆಂಗಳೂರು: ಕರ್ನಾಟಕದಲ್ಲಿ ಮೇ 10ರಿಂದ 24ರ ವರೆಗೆ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಶುಕ್ರವಾರ ಸಂಜೆ ಸಿಎಂ ಯಡಿಯೂರಪ್ಪನವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಸಚಿವರು, ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ನಂತರ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಲಾಕ್ ಡೌನ್ ಮಾಡುವ ತೀರ್ಮಾನ ಪ್ರಕಟಿಸಿದರು.
ಲಾಕ್ ಡೌನ್ ಅವಧಿಯಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಹೊಟೇಲ್, ರೆಸ್ಟೋರೆಂಟ್ ಗಳಿಂದ ಪಾರ್ಸೆಲ್ ಗೆ ಅವಕಾಶವಿದ್ದು, ಮದುವೆಗೆ 50 ಜನ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಸಿಎಂ ತಿಳಿಸಿದರು.
ಲಾಕ್ ಡೌನ್ ಸಮಯದಲ್ಲಿ ತುರ್ತು ಸೇವೆ, ಸಂಚಾರಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ದಿನಸಿ, ಹಾಲು, ತರಕಾರಿ ಖರೀದಿಗೆ ಮಾತ್ರ ಸಮಯ ನಿಗದಿ ಮಾಡಿ ಅನುಮತಿ ನೀಡಲಾಗುತ್ತದೆ. ಅಂತರ್ ಜಿಲ್ಲಾ, ಅಂತಾರಾಜ್ಯ ಸಂಚಾರ ಸಂಪೂರ್ಣ ಬಂದ್ ಆಗಲಿದ್ದು, ಕೋವಿಡ್ ಸಂಬಂಧಿತ ಸರ್ಕಾರಿ ಇಲಾಖೆ, ಕಚೇರಿ-ಸಂಸ್ಥೆಗಳು ಬಿಟ್ಟು ಉಳಿದ ಎಲ್ಲ ಕಚೇರಿಗಳು ಬಂದ್ ಆಗಲಿದೆ.
ಜಿಲ್ಲೆ, ರಾಜ್ಯಗಳ ಗಡಿ ಭಾಗಗಳಲ್ಲಿ ಬಿಗಿ ನಿಬರ್ಂಧ ಹೇರಲಾಗುತ್ತದೆ. ಪೆÇಲೀಸ್ ಕಾವಲು ಬಿಗಿಯಾಗಲಿದೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಕೇಸ್ ಹಾಕಲಾಗುತ್ತದೆ.
ಮೇ 10ರಿಂದ 24ರವರೆಗೆ ಲಾಕ್ ಡೌನ್ -ಸಿಎಂ ಯಡಿಯೂರಪ್ಪ

