ಗುವಾಹಟಿ: ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮ ಸೋಮವಾರ ಅಧಿಕಾರ ವಹಿಸಿಕೊಂಡರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಶ್ ಮುಖಿ ಅವರು ನೂತನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಬಿಜೆಪಿ ರಾμÁ್ಟ್ರಧ್ಯಕ್ಷ ಜೆ ಪಿ ನಡ್ಡಾ, ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ದೇವ್, ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಮಣಿಪುರ ಸಿಎಂ ಎನ್. ಬಿರೆನ್ ಸಿಂಗ್ ಮತ್ತು ನಾಗಾಲ್ಯಾಂಡ್ ಸಿಎಂ ನೀಫಿಯು ರಿಯೊ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

