ಬೆಂಗಳೂರು: ಆಮ್ಲಜನಕ, ರೆಮಿಡಿಸಿವಿರ್ ಜತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಸರಕಾರಿ ಬೆಡ್‍ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ (sast) ಪೆÇೀರ್ಟಲ್ ನಲ್ಲಿ ಸಿಗುವ ಹಾಗೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ರಾಜ್ಯ ಕೋವಿಡ್ ವಾರ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಆಮ್ಲಜನಕ & ರೆಮಿಡಿಸಿವಿರ್ ಬೇಡಿಕೆ- ಪೂರೈಕೆಯಲ್ಲಿ ಪಾರದರ್ಶಕತೆ ಬಹಳ ಮುಖ್ಯ. ಎಷ್ಟು ಪೂರೈಕೆ ಆಗುತ್ತಿದೆ? ಎಷ್ಟು ಬಳಕೆಯಾಗುತ್ತಿದೆ? ಯಾರಿಗೆ ಕೊಡಲಾಗಿದೆ? ಎಂಬ ಸಮಗ್ರ ಮಾಹಿತಿಯನ್ನು ಇದೇ ಪೆÇೀರ್ಟಲ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು ಎಂದರು.
ರಾಜ್ಯಾದ್ಯಂತ ಆಕ್ಸಿಜನ್ ಬೆಡ್‍ಗಳಿಗೆ ಭಾರೀ ಬೇಡಿಕೆ ಇದೆ. ಸರಕಾರಿ ಆಸ್ಪತ್ರೆಗಳ ಜತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಇರುವ ಸರಕಾರದ ಬೆಡ್‍ಗಳ ಮಾಹಿತಿಯನ್ನು ಕೂಡ ಈ ಪೆÇೀರ್ಟಲ್ ನಲ್ಲಿ ಹಾಕಲಾಗುವುದು. ಇದರಿಂದ ಸಾರ್ವಜನಿಕರಿಗೂ ವಾಸ್ತವ ಚಿತ್ರಣ ಸಿಗುವಂತಾಗಲಿದೆ ಎಂದರು.
ಇನ್ನು ಎರಡು-ಮೂರು ದಿನಗಳಲ್ಲೇ ಸಾಸ್ಟ್ ಪೆÇೀರ್ಟ್‍ಲ್‍ಗೆ (http://arogya.karnataka.gov.in) ಮೇಲೆ ತಿಳಿಸಿದ ಎಲ್ಲವನ್ನೂ ಲಿಂಕ್ ಮಾಡಲಾಗುವುದು ಎಂದು ಡಿಸಿಎಂ ತಿಳಿಸಿದರು.
ಬೆಂಗಳೂರಿನಲ್ಲಿ ಈಗ ಪರೀಕ್ಷೆಯಾದ 24 ಗಂಟೆ ಒಳಗೇ ಫಲಿತಾಂಶ ಬಂದು ಬಿಯು ನಂಬರ್ ಜನರೇಟ್ ಆಗುತ್ತದೆ. ರಾಜ್ಯದ ಉದ್ದಗಲಕ್ಕೂ ಹೀಗೆಯೇ ಆಗಬೇಕು. ರಾಜ್ಯದ ಸರಾಸರಿ ಪರಿಸ್ಥಿತಿ ನೋಡಿದರೆ ರಿಸಲ್ಟ್ ಬರಲು ನಾಲ್ಕೂವರೆ ದಿನದಿಂದ ಎರಡು ದಿನವಾಗುತ್ತಿದೆ. ಫಲಿತಾಂಶ ವಿಳಂಬದಿಂದ ಸೋಂಕು ಉಲ್ಬಣಿಸಿ ಹೆಚ್ಚು ಪ್ರಾಣನಷ್ಟ ಆಗುತ್ತಿದೆ ಎಂದು ಡಿಸಿಎಂ ಕಳವಳ ವ್ಯಕ್ತಪಡಿಸಿದರು.
ಸ್ಯಾಂಪಲ್ ಕಲೆಕ್ಟ್ ಮಾಡಿದ ಒಂದು ದಿನದೊಳಗೆ ವರದಿ ಕೊಡುವುದಕ್ಕೆ ಇರುವ ಅಡ್ಡಿಗಳನ್ನು ನಿವಾರಿಸಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ. ತಡವಾಗಿ ರಿಸಲ್ಟ್ ಕೊಡುವ ಲ್ಯಾಬ್‍ಗಳಿಗೆ ಪ್ರತಿ ಟೆಸ್ಟ್‍ಗೆ 150 ರೂ. ದಂಡ ವಿಧಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಹೋಮ್ ಐಸೋಲೇಷನ್ ಪ್ರಮಾಣ ಹೆಚ್ಚುತ್ತಿರುವುದರಿಂದ ಪಲ್ಸಾಸ್ಕೋಮೀಟರ್‍ಗಳಿಗೆ ಡಿಮಾಂಡ್ ಜಾಸ್ತಿಯಾಗಿದೆ. ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮಾರಲಾಗುತ್ತಿದೆ ಎಂಬ ಸರಕಾರಕ್ಕೆ ಬಂದಿದೆ. ಮೆಡಿಕಲ್ ಸ್ಟೋರ್‍ಗಳು ಆಗಿರಲಿ ಅಥವಾ ಇನ್ನಾರೇ ಆಗಿರಲಿ ಎಂಆರ್‍ಪಿಗಿಂತ ಹೆಚ್ಚು ಬೆಲೆಗೆ ಮಾರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದು ಪ್ರತಿ ರೆಮಿಡಿಸಿವರ್ ಸೇರಿ ಪ್ರತಿಯೊಂದು ಔಷಧಕ್ಕೂ ಅನ್ವಯ ಆಗುತ್ತದೆ. ಜನರು 112 ಹೆಲ್ಪ್‍ಲೈನ್ ಕರೆ ಮಾಡಿದರೆ ಅಂಥ ತಪ್ಪಿತಸ್ಥರನ್ನೂ ಕೂಡಲೇ ಬಂಧಿಸಲಾಗುವುದು. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಡಿಸಿಎಂ ಎಚ್ಚರಿಕೆ ನೀಡಿದರು.
ಸರಕಾರವು ದೊಡ್ಡ ಪ್ರಮಾಣದಲ್ಲಿ ಪಲ್ಸಾಸ್ಕೋಮೀಟರ್‍ಗಳನ್ನು ಖರೀದಿ ಮಾಡುತ್ತಿದೆ. ಪ್ರತೀ ಒಂದರ 350 ರೂ.ನಂತೆ ಕೊಡಲಾಗುತ್ತಿದೆ. ಹೀಗಿದ್ದರೂ ಜನರ ಅಗತ್ಯಕ್ಕಾಗಿ ಸರಕಾರ ಹೆಚ್ಚು ಪ್ರಮಾಣದಲ್ಲಿ ಕೊಳ್ಳುತ್ತಿದೆ ಎಂದರು ಅವರು.
ಡಿಸಿಎಂ ವಾರ್ ರೂಂಗೆ ಭೇಟಿ ನೀಡಿದ ವೇಳೆ ಮುಖ್ಯಮಂತ್ರಿಗಳ ಕಾರ್ಯನೀತಿ ಸಲಹೆಗಾರ ಪ್ರಶಾಂತ್ ಪ್ರಕಾಶ್ ಇದ್ದರು.
ಹಿರಿಯ ಐಎಎಸ್ ಅಧಿಕಾರಿಗಳಾದ ಪೆÇನ್ನುರಾಜ್, ಮೌನಿμï ಮುದ್ಗಲ್, ಪ್ರದೀಪ್, ಅರುಂಧತಿ ಚಂದ್ರಶೇಖರ್, ಗಿರಿಗೌಡ, ಸಾಸ್ಟ್ ಪೆÇೀರ್ಟ್‍ಲ್ ಕಾರ್ಯನಿರ್ವಾಹಕ ನಿರ್ದೇಶಕಿ ಎನ್.ಟಿ. ಅಬ್ರು, ಕೆಎಎಸ್ ಅಧಿಕಾರಿ ರಾಜೇಂದ್ರ ಕುಮಾರ ಮತ್ತಿತರರು ಇದ್ದರು.
ಸಾಸ್ಟ್ ಪೆÇೀರ್ಟಲ್ ನಲ್ಲಿ ಆಮ್ಲಜನಕ, ರೆಮಿಡಿಸಿವರ್ ಜತೆಗೆ ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್‍ಗಳ ಮಾಹಿತಿ

