ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ -ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ಡಾ. ಸಿ.ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಡಿಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಹಂತಹಂತವಾಗಿ ಲಸಿಕೆ ಕೊಡುತ್ತೇವೆ ಎಂದು ಹೇಳಿದ ಡಿಸಿಎಂ, ಎರಡನೇ ಡೋಸ್ ಮತ್ತು ಮೊದಲ ಡೋಸ್ ಸಮಸ್ಯೆ ಆಗುತ್ತಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಆನ್ ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಂಡವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಡಾ. ಸಿ.ಎನ್ ಅಶ್ವಥ್ ನಾರಾಯಣ ಹೇಳಿದರು.