ಬೆಂಗಳೂರು: ನ್ಯಾಯಾಧೀಶರು ಸರ್ವಜ್ಞರಲ್ಲ ಎಂದ ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿ. ಟಿ. ರವಿ ಮಾತನಾಡಿದರು.
ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿ.ಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ಹೇಳಿದ್ದಾರೆ.
ನ್ಯಾಯಾಧೀಶರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಿಟಿ ರವಿ, ತಜ್ಞರ ಸಮಿತಿ ನೀಡುವ ವರದಿಯನ್ನ ಆಧರಿಸಿಯೇ ಕೆಲಸ ಮಾಡಲಾಗುತ್ತೆ ಎಂದು ಕೇಂದ್ರ ಹೇಳಿದೆ. ಸುಪ್ರಿಂ ಕೋರ್ಟ್ ಕೂಡ ಇದನ್ನು ಒಪ್ಪಿದೆ ಎಂದು ತಿಳಿಸಿದರು.
ರೋಗದ ವಿಷಯದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಈಗ ಆಗುತ್ತಿರುವ ಸಾವು-ನೋವಿಗೆ ನಾವು ಚೈನಾ ವೈರಸ್‍ನ್ನು ದೂರಬೇಕೆ ಹೊರತು, ನರೇಂದ್ರ ಮೋದಿಯವರನ್ನಲ್ಲ ಎಂದು ಸಿ.ಟಿ.ರವಿ ಹೇಳಿದರು.
ನ್ಯಾಯಾಧೀಶರು ಸರ್ವಜ್ಞರಲ್ಲ ಎಂದ ಸಿ.ಟಿ ರವಿ

