ವ್ಯಾಕ್ಸಿನ್ ಪೆÇ್ರಡಕ್ಷನ್ ಆಗದಿದ್ದರೆ ನಾವೇನು ನೇಣುಹಾಕಿಕೊಳ್ಳಬೇಕಾ? -ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

ಬೆಂಗಳೂರು: ವ್ಯಾಕ್ಸಿನ್ ಪೆÇ್ರಡಕ್ಷನ್ ಆಗದಿದ್ದರೆ ನಾವೇನು ನೇಣುಹಾಕಿಕೊಳ್ಳಬೇಕಾ? ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಗುರುವಾರ ಡಿವಿಎಸ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ವ್ಯಾಕ್ಸಿನ್ ಒದಗಿಸಿ ಎಂದು ಕೋರ್ಟ್ ಹೇಳುತ್ತೆ. ಆದರೆ ಸಾಕಷ್ಟು ಪ್ರಮಾಣದಲ್ಲಿ ವ್ಯಾಕ್ಸಿನ್ ಪೆÇ್ರಡಕ್ಷನ್ ಆಗಲಿಲ್ಲವೆಂದರೆ ನಾವೇನು ನೇಣುಹಾಕಿಕೊಳ್ಳಬೇಕಾ? ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ. ಎಲ್ಲಾ ರಾಜ್ಯಗಳ ಜತೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ. ನಿರಂತರವಾಗಿ ಸಮಾಲೋಚನೆ ಮಾಡಿ ಮೋದಿ ಅವರು ಎಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿವಿಎಸ್ ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸದಾನಂದ ಗೌಡರು, ವಿರೋಧ ಪಕ್ಷದವರಿಗೆ ನಾನು ಒಂದು ಮಾತು ಹೇಳಲು ಬಯಸುತ್ತೇನೆ. ಪ್ರತಿಭಟನೆ ಮಾಡುವುದರಿಂದ ಕೊರೋನಾ ಹೋಗುತ್ತೆ ಎಂದರೆ ಬೀದಿಯಲ್ಲಿ ಪ್ರತಿಭಟನೆ ಮಾಡಿ. ನಮ್ಮ ಪ್ರಧಾನಿಗಳು ಯಾವುದೇ ಮೂಲೆಯಿಂದ ಒಂದೊಳ್ಳೆ ಸಲಹೆ ಬಂದರೂ ಸ್ವೀಕರಿಸಿ ಎಂದಿದ್ದಾರೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರೇ ನೀವು ಹೀಗೆ ಪ್ರತಿಭಟನೆ ಮಾಡುವ ಬದಲು, ನಿಯೋಗ ಹೊತ್ತೊಯ್ದು ಸಿಎಂ ಹಾಗೂ ಆರೋಗ್ಯ ಸಚಿವರ ಜೊತೆ ಕುಳಿತು ಮಾತನಾಡಿ ಎಂದರು.