ಬೆಂಗಳೂರು: ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ ನೀಡಲಾಗುವುದೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮಾತನಾಡಿದರು.
ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಪ್ರತಿ ವರ್ಷ 2 ಕೋಟಿ ರೂ., ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ತಲಾ 5 ಕೋಟಿ ರೂ. ನೀಡಲಾಗುತ್ತಿದೆ. ಪ್ರದೇಶಾಭಿವೃದ್ಧಿ ನಿಧಿ ಎಂದು ನೀಡಲಾಗುತ್ತದೆ. ಇದರಲ್ಲಿ ಒಂದು ಕೋಟಿ ರೂ.ವನ್ನು ಕಾಂಗ್ರೆಸ್ ಶಾಸಕರು, ಸಂಸದರು ದೇಣಿಗೆಯಾಗಿ ಲಸಿಕೆ ಖರೀದಿಸಲು ರಾಜ್ಯ ಸರಕಾರಕ್ಕೆ ನೀಡಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಎಲ್ಲಾ ತಜ್ಞರು ಹೇಳುತ್ತಾರೆ ಅಂತಿಮವಾಗಿ ಈ ರೋಗ ಹೋಗಬೇಕು ಅಂದ್ರೆ ವ್ಯಾಕ್ಸಿನ್ ಮಾಡಬೇಕು ಎಂದು. ಇದು ಕೇಂದ್ರ, ರಾಜ್ಯ ಸರ್ಕಾರಕ್ಕೆ ಗೊತ್ತಿತ್ತು. ಆದರೆ ಅಲ್ಲಿ ಮೋದಿ, ಇಲ್ಲಿ ಯಡಿಯೂರಪ್ಪ ನಿದ್ರಾವಸ್ಥೆಯಲ್ಲಿ ಇದ್ದಾರೆಂದು ಸಿದ್ದರಾಮಯ್ಯ ಟೀಕಿಸಿದರು.
ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ. -ಸಿದ್ದರಾಮಯ್ಯ

