ಚೆನ್ನೈ: ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್‍ಗಳನ್ನು ಸಂಗ್ರಹಿಸಿಟ್ಟುಕೊಂಡವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪೆÇಲೀಸ್ ಇಲಾಖೆಗೆ ಸೂಚಿಸಿದ್ದಾರೆ.
ಪೆÇಲೀಸ್ ಇಲಾಖೆಗೆ ಈ ಬಗ್ಗೆ ಶನಿವಾರ ನಿರ್ದೇಶನ ನೀಡಿರುವ ಸಿಎಂ ಸ್ಟಾಲಿನ್, ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ ಸಂಗ್ರಹಿಸಿ ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸ್ ದಾಖಲಿಸುವಂತೆ ತಿಳಿಸಿದ್ದಾರೆ.
ಸಮಾಜ ವಿರೋಧಿ ಶಕ್ತಿಗಳು ರೆಮ್‍ಡೆಸಿವಿರ್ ಔಷಧಿ ಸಂಗ್ರಹಿಸಿ ಅದನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿವೆ. ಅಂತೆಯೇ, ಆಮ್ಲಜನಕ ಸಿಲಿಂಡರ್‍ಗಳನ್ನು ಅತಿಯಾದ ಬೆಲೆಗೆ ಮಾರಾಟ ಮಾಡುವ ಬಗ್ಗೆ ದೂರುಗಳಿವೆ. ರಾಜ್ಯವು ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವಾಗ ಇವು ಗಂಭೀರ ಸ್ವಭಾವದ ಅಪರಾಧಗಳಾಗಿದೆ ಎಂದು ಸಿಎಂ ಸ್ಟಾಲಿನ್ ಅವರು ತಿಳಿಸಿದ್ದಾರೆ.
ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ ಸಂಗ್ರಹಿಸುವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಲು ಸಿಎಂ ಸ್ಟಾಲಿನ್ ಸೂಚನೆ

