ಮೈಸೂರು: ಕೊರೊನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಹೆದರಿದ ಶಿಕ್ಷಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಕೋಗಿಲೂರು ಗ್ರಾಮದ ಕೆ ಎನ್ ಲೋಕೇಶ್ (30) ಸಾವಿಗೆ ಶರಣಾದ ಶಿಕ್ಷಕ.
ಲೋಕೇಶ್ ಅವರ ಮೃತದೇಹ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೇರಳಾಪುರದ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.
ಅವರಿಗೆ ಕಳೆದ ಎರಡು ದಿನಗಳ ಹಿಂದೆ ತಲೆ ನೋವು ಕಾಣಿಸಿಕೊಂಡಿತ್ತು. ಅವರು ಕೆ ಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಮನೆಗೆ ಬಂದಿದ್ದರು. ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಬಂದ ಕಾರಣ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಕೋವಿಡ್ ಜಿಲ್ಲಾ ಆಸ್ಪತ್ರೆಯಿಂದ ಕರೆ ಮಾಡಿ ಔಷಧಿ ಕೊಡುತ್ತೇವೆ ಮನೆಯಲ್ಲಿಯೇ ಔಷಧಿ ತೆಗೆದುಕೊಳ್ಳಿ ಹೆದರಬೇಡಿ ಎಂದು ಧೈರ್ಯ ತುಂಬಿದ್ದಾರೆ.
ಆದರೆ ಶಿಕ್ಷಕ ಲೋಕೇಶ್ ಅರಕಲಗೂಡು ತಾಲೂಕಿನ ಕೇರಳಪುರದ ಪತ್ನಿ ಮನೆಗೆ ತೆರಳಿ ಮನೆ ಮುಂದೆ ಬೈಕ್ ನಿಲ್ಲಿಸಿ ಮೊಬೈಲ್ ಬಿಟ್ಟು ನಾಪತ್ತೆ ಆಗಿದರು. ಎಲ್ಲ ಕಡೆ ಹುಡುಕಾಡಿದರೂ ಎಲ್ಲಿಯೂ ಪತ್ತೆಯಾಗಿರಲಿಲ್ಲ.
ಕಣ್ಮರೆಯಾಗಿದ್ದ ಲೋಕೇಶ್ ಕೇರಳಪುರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಳೆದ ವರ್ಷ ಲೋಕೇಶ್ ಗೆ ವಿವಾಹವಾಗಿತ್ತು.
ವಿಷಯ ತಿಳಿದು ಕೊಣನೂರು ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

