ಕೊರೊನಾಗೆ ಗರ್ಭಿಣಿಯಾಗಿದ್ದ ಪೆÇ್ರಬೆಷನರಿ ಪಿಎಸ್ ಐ ಬಲಿ

ಬೆಂಗಳೂರು: ಕೊರೊನಾ ಸೋಂಕಿಗೆ 7 ತಿಂಗಳ ಗರ್ಭಿಣಿಯಾಗಿದ್ದ ಪೆÇ್ರಬೆಷನರಿ ಪಿಎಸ್ ಐ ಶಾಮಿಲಿ (24) ಬಲಿಯಾಗಿದ್ದಾರೆ.
ಮೂಲತಃ ಕೋಲಾರದವರಾದ ಶಾಮಿಲಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಕಚೇರಿಯಲ್ಲಿ ಪೆÇ್ರಬೆಷನರಿ ಪಿಎಸ್ ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
7 ತಿಂಗಳ ಗರ್ಭಿಣಿಯಾಗಿದ್ದ ಅವರು, ರಜೆ ತೆಗೆದುಕೊಂಡು ತಮ್ಮ ಊರು ಕೋಲಾರಕ್ಕೆ ಮರಳಿದ್ದರು.
ನಂತರ ಅವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಮೇ 2ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ. ಗರ್ಭಿಣಿಯಾಗಿದ್ದ ಕಾರಣ ಅವರು ಕೋವಿಡ್ ಲಸಿಕೆ ಪಡೆದುಕೊಂಡಿರಲಿಲ್ಲ ಎನ್ನಲಾಗಿದೆ.
ಈ ಕುರಿತು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಪೆÇಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೆÇಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ.