ಹಾಸನದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ -ಸಚಿವ ಗೋಪಾಲಯ್ಯ

ಹಾಸನ: ಹಾಸನದಲ್ಲಿ ವಾರದಲ್ಲಿ 4 ದಿನ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಘೋಷಣೆ ಮಾಡಿದರು.
ಪ್ರಧಾನಿ ನೇಂದ್ರ ಮೋದಿ ಅವರೊಂದಿಗೆ ಮಂಗಳವಾರ ವೀಡಿಯೋ ಕಾನ್ಫರೆನ್ನ್ ನಲ್ಲಿ ಭಾಗವಹಿಸಿದ ನಂತರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ವಾರದಲ್ಲಿ ಮೂರು ದಿನ ಮಾತ್ರ ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅಗತ್ಯ ವಸ್ತು ಖರೀದಿಸಲು ಅವಕಾಶ ಇರುತ್ತದೆ. ಸೋಮವಾರ, ಬುಧವಾರ, ಶುಕ್ರವಾರ ಬಿಟ್ಟು ಉಳಿದ ದಿನ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಸಚಿವ ಗೋಪಾಲಯ್ಯ ಹೇಳಿದರು.
ಜಿಲ್ಲೆಯಾದ್ಯಂತ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಲಾಕ್ ಡೌನ್ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯ ಜನತೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಗೋಪಾಲಯ್ಯ ಅವರು ಮನವಿ ಮಾಡಿದರು.