ಬೆಂಗಳೂರು: ಕೊರೊನಾ 2ನೇ ಅಲೆಯಿಂದ ಉಂಟಾಗಿರುವ ಸಮಸ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದರು.
ನಗರದಲ್ಲಿ ಬುಧವಾರ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕರಿಗೆ 3 ಸಾವಿರ, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ, ಅಗಸ, ಚಮ್ಮಾರ, ಕಮ್ಮಾರ, ಕುಂಬಾರ, ಕ್ಷೌರಿಕ ಸೇರಿದಂತೆ ಅಸಂಘಟಿತರಿಗೆ 2 ಸಾವಿರ, ರಸ್ತೆಬದಿ ವ್ಯಾಪಾರಿಗಳಿಗೆ 2 ಸಾವಿರ, ರಸ್ತೆ ಬದಿಯ ವ್ಯಾಪಾರಿಗಳಿಗೆ 2 ಸಾವಿರ, ಕಲಾವಿದರು, ಕಲಾ ತಂಡಕ್ಕೆ 3 ಸಾವಿರ ಸಹಾಯ ಧನವನ್ನು ಸಿಎಂ ಘೋಷಣೆ ಮಾಡಿದರು.
ಹಾಗೆಯೇ ಸಾಲ ಮರುಪಾವತಿಗೆ ಜುಲೈ ವರೆಗೆ ಅವಧಿ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ 5 ಕೆಜಿ ಅಕ್ಕಿ ನೀಡಲಾಗುವುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ರೇಷನ್ ಕೊಡಲಾಗುತ್ತದೆ. ಅಲ್ಲದೆ ಮೇ, ಜೂನ್ ಮಾಹೆಯ ರೇಷನ್ ಕೊಡಲಾಗುತ್ತೆ ಎಂದು ಬಿಎಸ್ ವೈ ತಿಳಿಸಿದರು.
ಸಾಲ ಮರುಪಾವತಿಗೆ 3 ತಿಂಗಳ ಅವಧಿ ವಿಸ್ತರಿಸಲಾಗಿದ್ದು, 3 ತಿಂಗಳ ಬಡ್ಡಿಯನ್ನು ಸರ್ಕಾರವೇ ಭರಿಸಲಿದೆ ಎಂದರು.
ಲೈನ್ ಮ್ಯಾನ್, ಗ್ಯಾಸ್ ತಲುಪಿಸುವವರು, ಶಿಕ್ಷಕರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ ಅವರು, ಲಾಕ್ ಡೌನ್ ವಿಸ್ತರಣೆ ಬಗ್ಗೆ 23ರಂದು ಸಭೆ ನಡೆಸಿ ನಿರ್ಧಾರ ಮಾಡುತ್ತೇವೆ ಎಂದರು.
ಮತ್ತೊಂದು ಪ್ರಶ್ನೆಗೆ ಸಿಎಂ ಉತ್ತರಿಸಿ, ಪ್ಯಾಕೇಜ್ ನಲ್ಲಿ ಲೋಪ ಆಗದಂತೆ ಕ್ರಮಕೈಗೊಳ್ಳಲಾಗುವುದು ಎಂದರು.
ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗಿದೆ. ಈವರೆಗೆ 2.6 ಲಕ್ಷ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ. ಇದಕ್ಕಾಗಿ 956 ಕೋಟಿ ಖರ್ಚು ಮಾಡಲಾಗುತ್ತದೆ.
1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಬಿಎಸ್ ವೈ

