ಹಳ್ಳಿಗಳಲ್ಲಿ ಕೊರೊನಾ ಸೋಂಕು ತೀವ್ರಗೊಳ್ಳಲು ರಾಜ್ಯ ಸರ್ಕಾರದ ವೈಪಲ್ಯ ಕಾರಣ -ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಹಳ್ಳಿಗಳಲ್ಲಿ ಕೊರೊನಾ ಸೋಂಕು ತೀವ್ರಗೊಳ್ಳಲು ರಾಜ್ಯ ಸರ್ಕಾರದ ವೈಪಲ್ಯ ಕಾರಣ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯನವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಹಳ್ಳಿಗಳಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾದ ವೈದ್ಯಕೀಯ ವ್ಯವಸ್ಥೆ ಇಲ್ಲ. ಸರಕಾರ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಕೊರೊನಾ ಸೋಂಕು ತೀವ್ರಗೊಳ್ಳುತ್ತಿದೆ ಎಂದು ಅವರು ಹೇಳಿದರು.