ಕರ್ನಾಟಕದಲ್ಲಿ ಲಾಕ್ ಡೌನ್ ಜೂ. 7ರ ವರೆಗೆ ವಿಸ್ತರಣೆ -ಸಿಎಂ

ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಅನ್ನು ಜೂ. 7ರ ವರೆಗೆ ವಿಸ್ತರಿಸಿದೆ.
ಇದೇ ಮೇ 24ರವರೆಗೆ ಲಾಕ್‍ಡೌನ್ ಘೋಷಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗ ಲಾಕ್ ಡೌನ್ ಅನ್ನು ಜೂ. 7ರ ವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.
ಸಚಿವರ ಜೊತೆ ಶುಕ್ರವಾರ ಸಿಎಂ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿದರು.
ಈ ಅವಧಿಯಲ್ಲಿ ರಾಜ್ಯಾದ್ಯಂತ ಟಫ್ ರೂಲ್ಸ್ ಮುಂದುವರೆಯಲಿದೆ ಎಂzಲ್ಸ್ಸಿಎಂ ತಿಳಿಸಿದರು.
ರಾಜ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದೇವೆ. ಕೋವಿಡ್ ಹಳ್ಳಿಗಳಿಗೆ ಹರಡುತ್ತಿರುವ ಕಾರನದಿಂದ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮುಂದುವರಿಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಹಿಂದಿನ ಮಾರ್ಗಸೂಚಿ ನಿಯಮಗಳೇ ಮುಂದುವರಿಯಲಿವೆ ಎಂದು ಸಿಎಂ ತಿಳಿಸಿದರು. ಬೆಳಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರಬರದೇ ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಜನತೆಯಲ್ಲಿ ಮನವಿ ಮಾಡಿದÀರು.
ಬೆಳಗ್ಗೆ 10 ಗಂಟೆಯ ನಂತರವೂ ಜನ ಅನಗತ್ಯವಾಗಿ ಓಡಾಡುತ್ತಿರುವುದು ಕಂಡು ಬರುತ್ತಿದೆ. ಜನ ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮುಂದುವರೆಯಲಿದೆ. ಈಗ ಜಾರಿಯಲ್ಲಿರುವ ಎಲ್ಲಾ ಲಾಕ್‍ಡೌನ್ ನಿಯಮಗಳೂ ಜೂ. 7ರವರೆಗೆ ಮುಂದುವರೆಯಲಿದೆ ಎಂದರು.