ಬೆಂಗಳೂರು: ವ್ಯಾಕ್ಸಿನೇಷನ್ ದಂಧೆಗೆ ಅವಕಾಶ ಕೊಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಗೃಹ ಸಚಿವರು ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಲಸಿಕೆಗಳನ್ನು ಅಕ್ರಮವಾಗಿ ಯಾರಾದರೂ ಸಂಗ್ರಹಣೆ ಮಾಡಿಟ್ಟುಕೊಂಡರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಅವರು ಎಚ್ಚರಿಕೆ ನೀಡಿದರು.
ಈ ಹಿಂದೆ ರೆಮಿಡಿಸಿವರ್ ಇಂಜೆಕ್ಷನ್ ವಿಷಯದಲ್ಲಿ ಈ ರೀತಿ ಮಾಡಿದ್ದರು. ಈಗ ವ್ಯಾಕ್ಸಿನೇಷನ್ ದಂಧೆಗೆ ಅವಕಾಶ ಕೊಡುವುದಿಲ್ಲ. ಇಂತವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದೆಂದರು.
ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅಂತವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಯಾರೊಬ್ಬರೂ ಇದರಲ್ಲಿ ಭಾಗಿಯಾಗಬಾರದೆಂದು ಹೇಳಿದರು.
ಖಾಸಗಿ ಆಸ್ಪತ್ರೆಗಳವರು ಹೆಚ್ಚಿನ ದರದಲ್ಲಿ ವ್ಯಾಕ್ಸಿನೇಷನ್ ನೀಡುವ ಸಂಬಂಧ ಕೇಂದ್ರ ಒಂದು ನಿಯಮ ರೂಪಿಸುವ ಅಗತ್ಯ ಇದೆ ಎಂದರು.
ರಾಜ್ಯದಲ್ಲಿ ಬೆಡ್ ಸಮಸ್ಯೆ ಬಗೆಹರಿಯುತ್ತಿದೆ. ವೆಂಟಿಲೇಟರ್ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಇಂದಿನಿಂದ ಎರಡನೇ ಹಂತದ ಲಾಕ್ ಡೌನ್ ವಿಸ್ತರಣೆ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲು ರಾಜ್ಯದ ಪೆÇಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.
ಅನಗತ್ಯವಾಗಿ ಓಡಾಡುವ ವಾಹನಗಳ ವಶಕ್ಕೆ ಪಡೆಯುವ ಪ್ರಕರಣ ಮುಂದುವರೆಸಲಾಗುತ್ತೆ. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಓಡಾಡುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.
ವ್ಯಾಕ್ಸಿನೇಷನ್ ದಂಧೆಗೆ ಅವಕಾಶ ಕೊಡುವುದಿಲ್ಲ -ಗೃಹ ಸಚಿವ ಬೊಮ್ಮಾಯಿ

