ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್. ಎಸ್. ದೊರೆಸ್ವಾಮಿ (104) ಬುಧವಾರ ನಿಧನರಾಗಿದ್ದಾರೆ.
ಕೊರೊನಾದಿಂದ ಚೇತರಿಸಿಕೊಂಡ ನಂತರ ಅವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತು.
ಅವರನ್ನು ನಗರದಲ್ಲಿನ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಕೊನೆಯುಸಿರೆಳೆದರು.
ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ.
ಏ. 10, 1918ರಲ್ಲಿ ಜನಿಸಿದ್ದ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು.
ಹಲವು ಸಾಮಾಜಿಕ ಹೋರಾಟದಲ್ಲಿ ಅವರು ಭಾಗವಹಿಸಿದ್ದರು.

