ಮೈಸೂರಲ್ಲಿ ಎರಡು ದಿನ ದಿನಸಿ ಖರೀದಿಗೆ ಅವಕಾಶ –ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಲಾಕ್ ಡೌನ್ ಜಾರಿಯಲ್ಲಿದ್ದರೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಮೇ 29ರಿಂದ ಜೂ. 7ರ ವರೆಗೆ ವಾರದಲ್ಲಿ ಎರಡು ದಿನಗಳು ಮಾತ್ರ ದಿನಸಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ವೈದ್ಯಕೀಯ ಸೇವೆಗಳು ಹಾಗೂ ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಬರ್ಂಧಿಸುವುದು ಸೂಕ್ತವೆಂದು ಮನವರಿಕೆಯಾಗಿರುವುದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯ ಹಿತದೃಷ್ಟಿಯಿಂದ ಕೊರೊನಾ ವೈರಸ್ ನ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮೇ 29ರಿಂದ ಜೂ. 7ರವರೆಗೆ ವಾರದ ಎರಡು ದಿನಗಳು ಅಂದರೆ ಸೋಮವಾರ ಮತ್ತು ಗುರುವಾರಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಅನುಮತಿ ನೀಡಿ ಬ್ಯಾಂಕ್ ಭಾರತೀಯ ವಿಮಾ ಯೋಜನೆಗಳ ವ್ಯವಹಾರಗಳನ್ನು ಈ ದಿನಗಳಂದು ಮಾತ್ರ ಬೆಳಿಗ್ಗೆ 8ರಿಂದ 12ಗಂಟೆಯವರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಸ್ಟಾಂಡ್ ಅಲೋನ್ ಹಾಲಿನ ಬೂತ್ ಗಳು, ವೈದ್ಯಕೀಯ ಸೇವೆಗಳು, ಹಾಪ್ ಕಾಮ್ಸ್ ಅಡಿಯಲ್ಲಿ ಬರುವ ತರಕಾರಿ ಮತ್ತು ಹಣ್ಣಿನ ಅಂಗಡಿಗಳು ಹಾಗೂ ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿμÉೀಧಿಸಲಾಗಿದೆ.
ನಿμÉೀಧಾಜ್ಞೆಯ ಅವಧಿಯಲ್ಲಿ ಸರಕು ಸಗಟು ವಾಹನಗಳನ್ನು ಹೊರತುಪಡಿಸಿ ಯಾವುದೇ ವಾಹನ ಸಂಚಾರ ಹಾಗೂ ವ್ಯಕ್ತಿಗಳ ಓಡಾಟ ಕಂಡು ಬಂದಲ್ಲಿ ಕ್ರಮ ವಹಿಸಲಾಗುವುದು. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.