ಬೆಂಗಳೂರು: ನನ್ನ ಅಧಿಕಾರವನ್ನು ಮಗ ಚಲಾಯಿಸಬಾರದು ಎಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸಚಿವ ಸಿ.ಪಿ ಯೋಗೇಶ್ವರ್ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನನ್ನ ಇಲಾಖೆಯಲ್ಲಿ ಮತ್ತೊಬ್ಬ ವ್ಯಕ್ತಿಯ ಹಸ್ತಕ್ಷೇಪವನ್ನು ನಾನು ಸಹಿಸುವುದಿಲ್ಲ ಎಂದು ಅವರು ಹೇಳಿ, ನನ್ನ ಅಧಿಕಾರವನ್ನು ಮಗ ಚಲಾಯಿಸಬಾರದು ಎಂದು ಮಾರ್ಮಿಕವಾಗಿ ಹೇಳಿದರು.
ನಾನು ದೆಹಲಿಗೆ ಹೋಗಿದ್ದು ನಿಜ. ನಾನು ಯಾವಾಗಲೂ ದೆಹಲಿಗೆ ಹೋಗ್ತೀನಿ ಬರ್ತೀನಿ. ನನ್ನ ವೈಯಕ್ತಿಕ ಕಾರಣಕ್ಕಾಗಿ ನಾನು ದೆಹಲಿಗೆ ಹೋಗಿದ್ದೆ ಎಂದು ಯೋಗೇಶ್ವರ್ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷಗಳ ಸರ್ಕಾರ ಅಧಿಕಾರದಲ್ಲಿದೆ ಎಂದು ಯೋಗೇಶ್ವರ್ ಹೇಳಿದರು.
ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಬೇಕಿದೆ. ಆ ಬಗ್ಗೆ ಕೆಲ ಸಮಸ್ಯೆಗಳನ್ನು ಪಕ್ಷದ ನಾಯಕರಿಗೆ ತಿಳಿಸಲು ದೆಹಲಿಗೆ ಹೋಗಿದ್ದೆ ಎಂದ ಅವರು ಸಿಎಂ ಬದಲಾವಣೆ ಮಾಡಿಸುವಷ್ಟು ನಾನು ದೊಡ್ಡವನಲ್ಲ ಎಂದು ಯೋಗೇಶ್ವರ್ ಹೇಳಿದರು.
ನನ್ನ ಅಧಿಕಾರವನ್ನು ಮಗ ಚಲಾಯಿಸಬಾರದು -ಸಚಿವ ಯೋಗೇಶ್ವರ್

