ರೇಪಿಸ್ಟ್ ರಮೇಶನ ಬಂಧನವಾಗಬೇಕು – ಡಿ.ಕೆ. ಶಿವಕುಮಾರ್

ಬೆಂಗಳೂರು:ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯದ ಮಹಿಳೆಯರರ ಹಾಗೂ ಪೆÇಲೀಸ್ ಅಧಿಕಾರಿಗಳ ಆತ್ಮಗೌರವ ರಕ್ಷಣೆಗೆ ಪೆÇಲೀಸರು ರೇಪಿಸ್ಟ್ ರಮೇಶನನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಗುರುವಾರ ಜಂಟಿ ಸುದ್ದಿಗೋಷ್ಠಿ ನಡೆಸಿ ಶಿವಕುಮಾರ್ ಅವರು ಮಾತನಾಡಿದರು.
ನಮಗೆ ವ್ಯಕ್ತಿಗಿಂತ ಕರ್ನಾಟಕ ರಾಜ್ಯದ ಪೆÇೀಲೀಸ್ ಇಲಾಖೆ ಗೌರವ ಮುಖ್ಯ. ಪೆÇಲೀಸ್ ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲಾಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಆರೋಪಿಯನ್ನು ರಕ್ಷಿಸುತ್ತಿದ್ದಾರೆಂದರು.
ಮುಖ್ಯಮಂತ್ರಿ ಯಡಿಯೂರಪ್ಪನವರು ಹಾಗೂ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಟ್ಟ ಸಂಪ್ರದಾಯಕ್ಕೆ ಬುನಾದಿ ಹಾಕಿಕೊಡುತ್ತಿದ್ದಾರೆ. ಕೆಟ್ಟ ಇತಿಹಾಸ ನಿಮ್ಮಿಂದ ನಿರ್ಮಾಣವಾಗುತ್ತದೆ ಎಂದರು.
ಭವಿಷ್ಯದಲ್ಲಿ ಇಂತಹ ಯಾವುದೇ ಪ್ರಕರಣ ವರದಿಯಾದರೂ ಈ ಪ್ರಕರಣವನ್ನು ಉದಾಹರಣೆಯನ್ನಾಗಿ ತೆಗೆದುಕೊಳ್ಳುತ್ತಾರೆ. ನಾನು ಸೌಮೇಂದು ಮುಖರ್ಜಿ, ಸಂದೀಪ್ ಪಾಟೀಲ್, ಅನುಚೇತ್ ಸೇರಿದಂತೆ ಎಲ್ಲ ಪೆÇಲೀಸ್ ಅಧಿಕಾರಿಗಳಿಗೆ ಒಂದು ವಿಚಾರ ಹೇಳಲು ಬಯಸುತ್ತೇನೆ. ನೀವು ಇನ್ನು ಹತ್ತಾರು ವರ್ಷ ಪೆÇಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕಿದೆ. ರಾಜಕಾರಣಿಗಳು ಇಂದು ಇರುತ್ತಾರೆ, ನಾಳೆ ಹೋಗುತ್ತಾರೆ. ಆದರೆ ಪೆÇಲೀಸರು ತಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಬಾರದು. ನೀವು ಹಾಕಿಕೊಂಡಿರುವ ಸ್ಟಾರ್ ಗಳಿಗೆ ಧಕ್ಕೆ ತಂದುಕೊಳ್ಳಬಾರದು. ಕೆಟ್ಟ ಉದಾಹರಣೆಯಾಗಬಾರದು ಎಂದು ಡಿಕೆಶಿ ಹೇಳಿದರು.
ಹೀಗಾಗಿ ಕೂಡಲೇ ರೇಪಿಸ್ಟ್ ರಮೇಶನನ್ನು ಬಂಧಿಸಿ, ಆತನ ವೈದ್ಯಕೀಯ ಪರೀಕ್ಷೆ ನಡೆಸಬೇಕು. ಇದು ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ವಿಚಾರವಲ್ಲ, ರಾಜ್ಯದ ಘನತೆ, ರಾಜ್ಯದ ಮಹಿಳೆಯರ ರಕ್ಷಣೆಗೆ ಸಂಬಂಧಿಸಿದ ವಿಚಾರ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸುತ್ತದೆ ಎಂದರು.
ಗೃಹ ಸಚಿವರೇ ನೀವು ನ್ಯಾಯ ನೀಡುವ ಸ್ಥಾನದಲ್ಲಿ ಕೂತು ಅನ್ಯಾಯಕ್ಕೆ ಅವಕಾಶ ಕೊಡಬಾರದು ಎಂದು ಡಿಕೆಶಿ ಹೇಳಿದರು.