ಮೈಸೂರು: ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ; ತಾಕತ್ತಿದ್ದರೆ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿಸಿ ಎಂದು ಶಾಸಕ ಜಿ.ಟಿ.ದೇವೇಗೌಡ ಸಂಸದ ಪ್ರತಾಪ್ ಸಿಂಹ ಅವರಿಗೆ ಸವಾಲು ಹಾಕಿದ್ದಾರೆ.
ನಗರದ ದಟ್ಟಗಳ್ಳಿಯಲ್ಲಿ ನೂತನವಾಗಿ ಕಾರ್ಯರಂಭ ಮಾಡಿರುವ ‘ಕೋವಿಡ್ ಮಿತ್ರ’ ಕೇಂದ್ರಕ್ಕೆ ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ಆಂಬ್ಯುಲೆನ್ಸ್ ಕೊಡುಗೆ ನೀಡಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಹುಲಿ ಆಗಲ್ಲ. ಸುಖಾ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ ಎಂದು ಜಿಟಿಡಿ ಕಿವಿಮಾತು ಹೇಳಿದರು.
ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿಸಿ. ಸುಖಾ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ. ಜಿಲ್ಲೆಯ ಶಾಸಕರು ನಿಮಗಿಂತ ಹೆಚ್ಚು ಕೆಲಸ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದರಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯಾ ಹೇಳು ಎಂದು ಜಿಟಿಡಿ ಪ್ರತಾಪ್ ಸಿಂಹರನ್ನು ಉದ್ದೇಶಿ ಪ್ರಶ್ನಿಸಿದರು.
ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು ಆಡಳಿತ ಪಕ್ಷದವರಲ್ಲ. ನೀನು ಪವರ್‍ಫುಲ್ ಎಂಪಿ. ಪಿಎಂ, ಸಿಎಂ ನೀನು ಹೇಳಿದಂತೆ ಕೇಳ್ತಾರೆ. ತಾಕತ್ತಿದ್ದರೆ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ತೋರಿಸಿ ಎಂದು ಜಿಟಿಡಿ ಪ್ರತಾಪ್ ಸಿಂಹರಿಗೆ ಸವಾಲು ಹಾಕಿದರು.
ತಾಕತ್ತಿದ್ದರೆ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿಸಿ: ಪ್ರತಾಪ್ ಸಿಂಹಗೆ ಜಿ.ಟಿ.ಡಿ ಸವಾಲು

