ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಜೂ. 7ರವರೆಗೆ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಲಾಕ್‍ಡೌನ್ ವಿಸ್ತರಣೆ ಕುರಿತು ಜೂ. 5 ಅಥವಾ 6ರಂದು ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸಿಎಂ ಬಿಎಸ್ ವೈ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಜೂ. 7ರ ನಂತರ ಕರ್ನಾಟಕದಲ್ಲಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಜೂ. 5, 6ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡಲಾಗುತ್ತದೆ ಎಂದರು.
ತಜ್ಞರು, ಸಚಿವರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಜಾಸ್ತಿ ಇದೆ. ಲಾಕ್‍ಡೌನ್ ವಿಸ್ತರಣೆ ಮಾಡಿ ಅಂತ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಲಾಕ್‍ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಸೂಚಿಸಿದೆ ಎಂದು ಯಡಿಯೂರಪ್ಪ ಹೇಳಿದರು.
ಲಾಕ್‍ಡೌನ್ ವಿಸ್ತರಣೆ ಬಗ್ಗೆ ಜೂ. 6ರೊಳಗೆ ನಿರ್ಧಾರ -ಸಿಎಂ ಬಿಎಸ್ ವೈ

