ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಭಾನುವಾರ ಪ್ರತಾಪ್ ಸಿಂಹ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸರ್ಕಾರ ಕೋವಿಡ್ ನಿರ್ವಹಣೆಗೆ ಮೈಸೂರು ಜಿಲ್ಲೆಗೆ 41 ಕೋಟಿ ಹಣ ಕೊಟ್ಟಿದೆ. ಇದುವರೆಗೂ 39 ಕೋಟಿ ಖರ್ಚಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಮೊದಲು ಇದರ ಲೆಕ್ಕ ಕೊಡಿ. ಕೋವಿಡ್ ಔಷಧಿ ಖರೀದಿಸಲು ಟೆಂಡರ್ ಅದು ಇದು ಅಂತೀರಾ? ಸ್ವಿಮ್ಮಿಂಗ್ ಪೂಲ್ ಕಟ್ಟಿಸಲು ಟೆಂಡರ್ ಕಾಯ್ದೆ ನೋಡಿದ್ರಾ ? ಪಾರಂಪರಿಕ ನಿಯಮ ಪಾಲಿಸಿದ್ದೀರಾ ? ಮೈಸೂರು ಮಹಾನಗರ ಪಾಲಿಕೆಯಿಂದ ಪರ್ಮಿಷನ್ ಪಡೆದಿದ್ದೀರಾ ? ಇದಾವುದಕ್ಕೂ ನಿಯಮ ಪಾಲಿಸಿಲ್ಲವೆಂದ ಮೇಲೆ, ಔಷಧಿ ಖರೀದಿಗೆ ಟೆಂಡರ್ ಕಾಯ್ದೆ ಬೇಕಾ ಎಂದು ಕೇಳಿದರು.
16 ಸ್ಟೆಪ್ ಡೌನ್ ಆಸ್ಪತ್ರೆ ತೆರೆಯಲು ಕಮಿಟಿ ವರಿದಿ ನೀಡಿದೆಯಾ ? ಶಾಸಕ ರಾಮದಾಸ್ ಇದರ ಭ್ರμÁ್ಟಚಾರ ಪತ್ತೆ ಹಚ್ಚುವ ತನಕ ಯಾರೂ ಗಮನಹರಿಸಿರಲಿಲ್ಲ. ನೀವು ಯಾರ ಅನುಮತಿ ಪಡೆದು 16 ಸ್ಟೆಪ್ ಡೌನ್ ಆಸ್ಪತ್ರೆ ಗೆ ಅನುಮತಿ ನೀಡಿದಿರಿ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.
ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಪ್ರತಾಪ್ ಸಿಂಹ ಮತ್ತೊಮ್ಮೆ ವಾಗ್ದಾಳಿ

