ಮೋದಿ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ -ಸಚಿನ್

ಮೈಸೂರು: ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿರವರ ದಕ್ಷ ಆಡಳಿತದಿಂದ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆಂದು ಚಾಮರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿರವರು ಎರಡನೇ ಅವಧಿಯ 2ವರ್ಷ ಪೂರೈಸಿದ ಹಿನ್ನಲೆಯಲ್ಲಿ ಬಿಜೆಪಿ ಸೇವೆಯೇ ಸಂಘಟನೆ ಎಂಬ ಕಾರ್ಯಕ್ರಮದ ಅಂಗವಾಗಿ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಕೃಷ್ಣರಾಜ ಆಸ್ಪತ್ರೆ ಬಳಿ ಭಾನುವಾರ ನಿರ್ಗತಿಕರಿಗೆ ಮತ್ತು ರೋಗಿಗಳ ಸಂಬಂಧಿಕರಿಗೆ ಆಹಾರ ಪೆÇಟ್ಟಣ ಹಾಗೂ ನೀರಿನ ಬಾಟೆಲ್ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಚಾಮರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ರವರು ಮಾತನಾಡಿ, ಭಾರತದ ಕೋವ್ಯಾಕ್ಸಿನ್ ಲಸಿಕೆ ಉತ್ಪಾದನೆಗೆ ಇಡೀ ವಿಶ್ವದಲ್ಲೇ ಬೇಡಿಕೆ ಹೆಚ್ಚಿದೆ ಎಂದರು.
ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕಿದೆ ಎಂದವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಮಾಜಸೇವಕರಾದ ವಿನಯ್ ಬಾಬು, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಯಶಂಕರ್, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್, ಉಪಾಧ್ಯಕ್ಷರುಗಳಾದ ಯೋಗೀಶ್, ಪಂಕಜ್, ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಅರ್ಜುನ್ ಕುಮಾರ್, ಜೀವಧಾರ ಪದವಿಧರ ಸಮಿತಿಯ ವರಲಕ್ಷ್ಮಿ, ಶೀಲಾ, ಸರಸ್ವತಿ, ಸೌಮ್ಯ ಹಾಗೂ ಇನ್ನಿತರರು ಹಾಜರಿದ್ದರು.