ಲಾಕ್ ಡೌನ್ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸರ್ಕಾರ ತೀರ್ಮಾನಿಸುತ್ತದೆ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಲಾಕ್ ಡೌನ್ ಕುರಿತು ರಾಜ್ಯ ಸರ್ಕಾರ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಗರದಲ್ಲಿ ಸಚಿವರು ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಜನಪ್ರತಿನಿಧಿಗಳು ಜನರ ಜೀವನವನ್ನು ಬಹಳ ಹತ್ತಿರದಿಂದ ನೋಡುತ್ತಾರೆ. ಜನರ ಭಾವನೆಗಳಿಗೆ ಸ್ಪಂದಿಸಲು ಕೆಲ ಜನಪ್ರತಿನಿಧಿಗಳು ಲಾಕ್ ಡೌನ್ ಬಗ್ಗೆ ಹೇಳಿಕೆ ನೀಡಬಹುದು. ಆದರೆ ಸರ್ಕಾರವು ವೈಜ್ಞಾನಿಕ ನೆಲೆಗಟ್ಟಿನಲ್ಲೇ ಲಾಕ್ ಡೌನ್ ಕುರಿತು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದರು.
ಲಾಕ್ ಡೌನ್ ಗೆ ಸಂಬಂಧಿಸಿದಂತೆ ತಜ್ಞರು ವರದಿ ಸಲ್ಲಿಸಲಿದ್ದಾರೆ. ಇದನ್ನು ಮುಖ್ಯಮಂತ್ರಿಗಳಿಗೆ ನೀಡಿ ಚರ್ಚಿಸಲಾಗುವುದು. ನಂತರ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆಂದರು.
ಲಾಕ್ ಡೌನ್ ಎನ್ನುವುದು ವೈದ್ಯಕೀಯ ಸಂಗತಿ. ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ಎμÉ್ಟಲ್ಲ ಸಾವು ನೋವುಗಳಾಗಿದೆ ಎಂಬುದನ್ನು ಅರಿಯಬೇಕು. ಇದು ಸಾಂಕ್ರಾಮಿಕವಾಗಿರುವುದರಿಂದ ಬಹಳ ಎಚ್ಚರಿಕೆ ಬೇಕು. ಲಾಕ್ ಡೌನ್ ಅನ್ನು ತಾಂತ್ರಿಕವಾಗಿ ಅರ್ಥ ಮಾಡಿಕೊಳ್ಳದೆ, ವೈದ್ಯಕೀಯ ವಲಯದ ಪರಿಣತರ ಅಭಿಪ್ರಾಯ ಪಡೆಯದೆ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದು ಸಚಿವ ಸುಧಾಕರ್ ಹೇಳಿದರು.
ಈ ಸಂದರ್ಭದಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದೇ ಅಪ್ರಸ್ತುತ. ಮುಖ್ಯಮಂತ್ರಿ ಕುರ್ಚಿ ಖಾಲಿಯೇ ಇಲ್ಲದಿರುವಾಗ ಆ ಬಗ್ಗೆ ಮಾತನಾಡುವುದೇ ಅಸಂಬದ್ಧ ಎಂದು ಅವರು ಹೇಳಿದರು.