ಮೈಸೂರು ಐಎಎಸ್ ಅಧಿಕಾರಿಗಳ ಸಂಘರ್ಷ: ಇನ್ನೆರಡು ದಿನಗಳಲ್ಲಿ ಸರಿಪಡಿಸಲಾಗುವುದು -ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು: ಮೈಸೂರಿನ ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರವನ್ನು ಇನ್ನೆರಡು ದಿನಗಳಲ್ಲಿ ಸರಿಪಡಿಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಹೇಲಿದರು.
ನಗರದಲ್ಲಿ ಶುಕ್ರವಾರ ಸಚಿವ ಎಸ್.ಟಿ.ಎಸ್. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಐಎಎಸ್ ಅಧಿಕಾರಿಗಳ ಸಂಘರ್ಷ ನನ್ನ ಕೈಮೀರಿದೆ. ಅಧಿಕಾರಿಗಳ ಸಂಘರ್ಷ ನನ್ನ ವ್ಯಾಪ್ತಿಯಲ್ಲಿ ಉಳಿದಿಲ್ಲ. ಸಿಎಂಗೆ ಎಲ್ಲವನ್ನು ತಿಳಿಸಿದ್ದೇನೆ ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು.
ಕೋವಿಡ್ ನಿಯಂತ್ರಣ ಮಾಡೋದು ನನ್ನ ಆದ್ಯತೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ಯಾರು ಸರಿ ಯಾರು ತಪ್ಪು ಅಂತ ಹೇಳಲ್ಲ. ಎಲ್ಲವನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.