ಬೆಳಗಾವಿ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿ ಎಲ್ಲವು ಸುಗಮವಾಗದಿದ್ದರೆ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಕೂಡಾ ರದ್ದು ಮಾqಲ್ವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಈಗಾಗಲೆ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿರುವ ಬಗ್ಗೆ ಶಿಕ್ಷಣ ಸಚಿವ ಸುರೇಶಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಅದರಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸುವ ಬಗ್ಗೆ ವಿವರಿಸಿದ್ದಾರೆಂದರು.
ಆದರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕು ಸುಧಾರಣೆ ಕಂಡರೆ ಮಾತ್ರ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುತ್ತೇವೆ ಇಲ್ಲವಾದಲ್ಲಿ ಅದನ್ನು ಕೂಡಾ ರದ್ದು ಮಾಡುವ ಬಗ್ಗೆ ಸರಕಾರ ಕ್ರಮಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಹೇಳಿದರು.
ಡಿ.ಕೆ. ಶಿವಕುಮಾರ್ ಬಿಕ್ಷೆ ಬೇಡುತ್ತೇವೆ ಆದರೆ ನಮಗೆ ವ್ಯಾಕ್ಷಿನ್ ನೀಡಿ ಎಂದು ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಕೊರೊನಾ ಸೋಂಕು ಕಡಿಮೆ ಆಗದಿದ್ದರೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಕೂಡಾ ರದ್ದು -ಸಿಎಂ ಬಿಎಸ್ ವೈ

