ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪನಾಗ್ ರಾಜೀನಾಮೆ ವಾಪಸ್

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ರಾಜೀನಾಮೆ ವಾಪಸ್ ಪಡೆದಿದ್ದಾರೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿರುಕುಳ ಆರೋಪ ಮಾಡಿ ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪನಾಗ್ ರಾಜೀನಾಮೆ ನೀಡಿದ್ದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ದೌರ್ಜನ್ಯ, ಕಿರುಕುಳ ಆರೋಪ ಮಾಡಿ ರಾಜಿನಾಮೆ ನೀಡಿದ್ದ ಶಿಲ್ಪ್ಪನಾಗ್, ಇದೀಗ ರಾಜೀನಾಮೆಯನ್ನು ಹಿಂದಕ್ಕೆ ಪಡೆದಿದ್ದಾರೆ.
ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.
ಶುಕ್ರವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ .ರವಿಕುಮಾರ್ ಮೈಸೂರಿಗೆ ಆಗಮಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಿಲ್ಪನಾಗ್ ಅವರಿಂದ ಮಾಹಿತಿ ಪಡೆದಿದ್ದರು.