ರಾಜ್ಯದಲ್ಲಿ ಬಿಜೆಪಿಗೆ ಅಂತಿಮ ದಿನಗಳು ಹತ್ತಿರವಾಗುತ್ತಿವೆ -ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾವಿನ ಪ್ರಮಾಣ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಆದರೂ ಸರ್ಕಾರ ಬಡವರಿಗೆ ಲಸಿಕೆ ಹಾಕಲು ರೂ. 900 ಶುಲ್ಕ ವಸೂಲಿ ಮಾಡುತ್ತಿದ್ದು, ರಾಜ್ಯದಲ್ಲಿ ಬಿಜೆಪಿಗೆ ಅಂತಿಮ ದಿನಗಳು ಸಮೀಪಿಸಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಮಹದೇವಪುರ ಕ್ಷೇತ್ರದ ಬಿದರಹಳ್ಳಿಯಲ್ಲಿ ಉಚಿತ ಲಸಿಕೆ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ನಂತರ ಡಿಕೆ ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯಾದ್ಯಂತ ಸರಕಾರದ ಲಸಿಕಾ ಕಾರ್ಯಕ್ರಮ ಮಂದಗತಿಯಲ್ಲಿ ಸಾಗುತ್ತಿದ್ದು, ಸರ್ಕಾರ ನಮಗೆ ಅನುಮತಿ ನೀಡಿದರೆ ರಾಜ್ಯದ ಎಲ್ಲ ಜನರಿಗೂ ಉಚಿತ ಕೋವಿಡ್ ಲಸಿಕೆ ನೀಡುತ್ತೇವೆ ಎಮದು ಡಿಕೆಶಿ ಹೇಳಿದರು.
ಮೊನ್ನೆ ನಾನು ದಾವಣಗೆರೆಯಲ್ಲಿ ನನ್ನ ಎರಡನೇ ಲಸಿಕೆ ತೆಗೆದುಕೊಳ್ಳುವ ಮೂಲಕ ಉಚಿತ 3 ಲಕ್ಷ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿದ್ದೇನೆ. ಕಾಂಗ್ರೆಸ್ ಪಕ್ಷ ಘೋಷಿಸಿರುವ 100 ಕೋಟಿ ರೂ.ಗಳ ವಿಶೇಷ ಯೋಜನೆಗೆ ಸರ್ಕಾರ ಅನುಮತಿ ನೀಡಬೇಕು. ನಾವು ರಾಜ್ಯದ ಎಲ್ಲ ಜನರಿಗೂ ಉಚಿತ ಲಸಿಕೆ ನೀಡಲು ತಯಾರಿದ್ದೇವೆ ಎಂದರು.
ಕಾಂಗ್ರೆಸ್ ನಾಯಕರು ಜನರ ಜೀವ ಉಳಿಸಲು ಕೈ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ಲಸಿಕೆ ನೀಡುವುದರ ಜತೆಗೆ ಸಮಾಜದ ವಿವಿಧ ವರ್ಗದ ಜನರಿಗೆ ಉಚಿತ ಪಡಿತರ ಕಿಟ್‍ಗಳನ್ನು ವಿತರಿಸುತ್ತಿದ್ದಾರೆಂದರು.
ರಾಜ್ಯದ ಜನರ ಆರೋಗ್ಯ ರಕ್ಷಣೆ ಬಗ್ಗೆ ಅಸಡ್ಡೆ ತೋರಿಸಿ, ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಡಿಕೆ ಶಿವಕುಮಾರ್ ದೂರಿದರು.
ಇಂತಹ ಸಮಯದಲ್ಲೂ ಬಡ ಜನರಿಂದ ಪ್ರತಿ ಲಸಿಕೆಗೆ ರೂ. 900 ಪಡೆದು ಪೆÇೀಸ್ಟರ್ ಗಳಲ್ಲಿ ಬಿಜೆಪಿ ನಾಯಕರು ತಮ್ಮ ಫೆÇೀಟೋ ಹಾಕಿಕೊಂಡು ಮಿಂಚುತ್ತಿದ್ದಾರೆ. ಆದರೆ ಇದಕ್ಕೆ ವಿರುದ್ಧವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಜನರಿಗಾಗಿ ಉಚಿತ ವ್ಯಾಕ್ಸಿನೇಷನ್ ಶಿಬಿರಗಳನ್ನು ಆಯೋಜಿಸಲು ತಮ್ಮ ಜೇಬಿನಿಂದ ಹಣ ಖರ್ಚು ಮಾಡುತ್ತಿದ್ದಾರೆಂದು ಡಿಕೆಶಿ ತಿಳಿಸಿದರು.