ಬೆಂಗಳೂರು: ದೇಶದಾದ್ಯಂತ 18 ವರ್ಷ ಮೇಲ್ಪಟ್ಟರಿಗೆ ಉಚಿತ ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರ ಕಾಂಗ್ರೆಸ್ ಪಕ್ಷದ ಹೋರಾಟದ ಫಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಮಂಗಳವಾರ ಡಿಕೆ ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಅವರು ಮಾತನಾಡಿ, ಇದು ಕಾಂಗ್ರೆಸ್ ಪಕ್ಷದ ಹೋರಾಟ ಎಂದರು.
ದೇಶದ ಎಲ್ಲ ವಿರೋಧ ಪಕ್ಷಗಳು ಸೇರಿ, ಲಸಿಕೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರಗಳದ್ದಲ್ಲ. ಭಾರತ ಸರ್ಕಾರ ಇದರ ಜವಾಬ್ದಾರಿ ಹೊರಬೇಕು ಎಂದು ಒತ್ತಾಯ ಮಾಡುತ್ತಿದ್ದೆವು. ನಾವು ನಮ್ಮ ಅಭಿಯಾನ ಆರಂಭಿಸಿ, ರಾಜ್ಯಪಾಲರನ್ನು ಭೇಟಿಯಾಗಿ, ಅವರ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ರವಾನಿಸಲಾಗಿತ್ತು. ಜಿಲ್ಲಾ ಮಟ್ಟದಿಂದಲೂ ಒತ್ತಾಯ ಮಾಡಲಾಗಿತ್ತು.
ಇದೆಲ್ಲಕ್ಕಿಂತ ಮುಖ್ಯವಾಗಿ ಸುಪ್ರೀಂಕೋರ್ಟ್ ಕೊಟ್ಟ ಸೂಚನೆಗಳಿಗೆ ಎಲ್ಲರ ಪರವಾಗಿ ತಲೆಬಾಗಿ ಅಭಿನಂದನೆ ಸಲ್ಲಿಸಲು ಬಯಸುತ್ತೇನೆಂದರು.
ಉಚಿತ ಲಸಿಕೆ: ಕಾಂಗ್ರೆಸ್ ಹೋರಾಟದ ಫಲ -ಡಿಕೆಶಿ

