ಬಿಜೆಪಿ ಶಾಸಕ ಸಿ.ಎಂ ಉದಾಸಿ ನಿಧನ

ಬೆಂಗಳೂರು: ಬಿಜೆಪಿ ಶಾಸಕ ಸಿ.ಎಂ ಉದಾಸಿ (81) ನಿಧನ ಹೊಂದಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ ಉದಾಸಿ ಮಂಗಳವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ 81 ವರ್ಷದ ಸಿ.ಎಂ ಉದಾಸಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳ ಕೊನೆಯ ವಾರದಲ್ಲಿ ನಗರದ ನಾರಾಯಣ ಹೃದಯಾಲಯದಲ್ಲಿ ಸಿಎಂ ಉದಾಸಿ ಚಿಕಿತ್ಸೆ ಪಡೆಯುತ್ತಿದ್ದರು.
ಹಾವೇರಿಯ ಹಾನಗಲ್ ನಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿ ಅವರ ಪುತ್ರ ಸಂಸದ ಶಿವಕುಮಾರ್ ಉದಾಸಿ ತಿಳಿಸಿದ್ದಾರೆ.
ಸಿ.ಎಂ ಉದಾಸಿ ನಿಧನಕ್ಕೆ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪಗಳ ಸಂತಾಪ
ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿ.ಎಂ ಉದಾಸಿಯವರು ಸಜ್ಜನ ರಾಜಕಾರಣಿ. ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಚಿವರಾದ ಬಸವರಾಜ ಬೊಮ್ಮಾಯಿ, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ಗಣ್ಯರು ಸಿ.ಎಂ ಉದಾಸಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.