ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ -ಅರುಣ್ ಸಿಂಗ್

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಹೈಕಮಾಂಡ್ ಮಟ್ಟದಲ್ಲಿ ಈ ಕುರಿತು ಯಾವುದೇ ಮಾತುಕತೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೋವಿಡ್-19 ಸಂಕಷ್ಟದ ಸಮಯದಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ, ಕೋವಿಡ್ ಸಮಸ್ಯೆಗಳನ್ನು ಚೆನ್ನಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ. ಅವರ ಕೆಲಸದ ಬಗ್ಗೆ ವರಿಷ್ಠರಿಗೆ ಸಮಾಧಾನವಿದೆ. ಹೀಗಾಗಿ ಮುಖ್ಯಮಂತ್ರಿಯ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದವರು ಹೇಳಿದ್ದಾರೆ.
ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಿಸುವುದಿಲ್ಲ ಎಂದಿದ್ದಾರೆ.