ಮೈಸೂರು: ಮೈಸೂರು ಮಹಾನಗರ ಪಾಲಿಕೆಗೆ ನಾಳೆ (ಜೂ. 11) ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮೈಸೂರಿನ ಪ್ರದೀಪ್ ಎಂಬುವರು ಕೋವಿಡ್ ಸಂದರ್ಭದಲ್ಲಿ ಚುನಾವಣೆ ಬೇಡ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜೂ. 11ರಂದು ನಡೆಯಬೇಕಿದ್ದ ಮೇಯರ್ ಚುನಾವಣೆಗೆ ಹೈಕೋರ್ಟ್ ತಡೆ ನೀಡಿದೆ.
ಇದೇ ಜೂ. 21ರ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಿ ಎಂದು ನ್ಯಾಯಾಲಯ ಸೂಚಿಸಿದೆ.
ಮೈಸೂರು ಮೇಯರ್ ಚುನಾವಣೆ: ಹೈಕೋರ್ಟ್‍ನಿಂದ ತಡೆಯಾಜ್ಞೆ

