ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವೈಯಕ್ತಿಕ, ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ -ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಪಕ್ಷದ ಶಾಸಕರಾಗಲಿ, ನಾಯಕರಾಗಲಿ ಅಥವಾ ಕಾರ್ಯಕರ್ತರಾಗಲಿ ಮತ್ತೊಬ್ಬರ ವಿರುದ್ಧ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ವೈಯಕ್ತಿಕ ವಿಚಾರಗಳಿಗೆ ಹೋಗಬಾರದು. ಜಾತಿ, ಧರ್ಮ ಸೇರಿದಂತೆ ಯಾವುದೇ ಭಾವನೆಗಳಿಗೆ ಧಕ್ಕೆ ತರಬಾರದು. ಟೀಕಿಸುವ ಭರದಲ್ಲಿ ಗೌರವದ ಎಲ್ಲೆ ಮೀರಬಾರದು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಮೀರ್ ಅಹಮದ್ ಅವರು ಮುಂದಿನ ದಿನಗಳಲ್ಲಿ ಇಂತಹ ಟೀಕೆ, ಹೇಳಿಕೆ ನೀಡುವ ಮುನ್ನ ತಾವು ಒಂದು ಪಕ್ಷದ ಪ್ರತಿನಿಧಿ ಎಂಬುದನ್ನು ಮರೆಯಬಾರದು. ಇದು ಪುನಾರವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂದು ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.