ನಾನು ಮಂತ್ರಿಯಾಗಿರುವವರೆಗೂ ಅಪವಾದ ಹೊತ್ತುಕೊಂಡವರು ಕುಲಪತಿಯಾಗಲು ಸಾಧ್ಯವಿಲ್ಲ
ಬೆಂಗಳೂರು: ರೋಗ ಬಾರದಂತೆ ತಡೆಯುವ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆಗಳನ್ನು ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಸಚಿವರು ಮಾತನಾಡಿದರು.
ಅಲೋಪತಿಯಲ್ಲಿ ಸಂಶೋಧನೆಗಳನ್ನು ಮಾಡುವಂತೆ ಆಯುರ್ವೇದದಲ್ಲೂ ಹೆಚ್ಚು ಸಂಶೋಧನೆಗಳು ನಡೆಯಬೇಕು. ಎμÉ್ಟೀ ನಂಬಿಕೆ ಇದ್ದರೂ ಅದನ್ನು ಸಾಕ್ಷಿ ಸಮೇತ ನಿರೂಪಿಸಬೇಕು. ಸಂಶೋಧನೆ ಮತ್ತು ಆವಿμÁ್ಕರವನ್ನು ಹೆಚ್ಚಾಗಿ ಮಾಡಬೇಕು. ಪ್ರತಿ ಮೆಡಿಕಲ್ ಕಾಲೇಜುಗಳಲ್ಲಿ ಕೂಡ ಸಂಶೋಧನೆಗಳನ್ನು ಹೆಚ್ಚಿಸಬೇಕಿದೆ. ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಸಂಶೋಧನೆ ಅಗತ್ಯ ಎಂದರು.
ಆಕ್ಸಫರ್ಡ್ ವಿಶ್ವವಿದ್ಯಾಲಯ ಕೋವಿಡ್ ಲಸಿಕೆ ತಯಾರಿಸಿದೆ. ಅದೇ ರೀತಿ, ರಾಜೀವ್ ಗಾಂಧಿ ವಿವಿ ಕೂಡ ಯಾವುದೇ ರೋಗಗಳಿಗೆ ಪರಿಹಾರ ಕಂಡುಹಿಡಿಯುವಂತೆ ಸಂಶೋಧನೆ ನಡೆಯಬೇಕು. ಎನ್‍ಸಿಡಿ ಸಮಸ್ಯೆಯಿಂದಾಗಿ ಬಡ ರಾಷ್ಟ್ರಗಳಲ್ಲಿ ವಾರ್ಷಿಕ 28 ದಶಲಕ್ಷ ಜನರು ಮೃತರಾಗುತ್ತಿದ್ದಾರೆ. ಭಾರತದಲ್ಲಿ ಕೂಡ ಈ ಸಮಸ್ಯೆ ಹೆಚ್ಚಿದೆ. ಈ ರೋಗಗಳಿಗೆ ಆಯುರ್ವೇದ ಪದ್ಧತಿ ಹೆಚ್ಚು ಪರಿಹಾರ ನೀಡುತ್ತದೆ ಎಂದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚಿಸಬೇಕಾಗಿತ್ತು. ಆದರೆ ಕೋವಿಡ್ ನಿಂದಾಗಿ ಚರ್ಚೆ ನಡೆಸಲು ಆಗಿಲ್ಲ. ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ. ರಾಜ್ಯಪಾಲರ ಭೇಟಿಗೆ ಸಮಯ ಕೇಳಿ ನಂತರ ಚರ್ಚೆ ಮಾಡುತ್ತೇನೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ. ಅವರು ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಸ್ಥಾನ ತುಂಬುವ ಬಗ್ಗೆ ಚರ್ಚಿಸಲಾಗುವುದು. ಈ ಸ್ಥಾನಕ್ಕೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಆ ನಿಟ್ಟಿನಲ್ಲಿ ಸ್ಥಾನ ತುಂಬಬೇಕೆಂಬುದನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು. ಅನುಮಾನಕ್ಕೂ ಅವಕಾಶವಿಲ್ಲದ ಶುದ್ಧ ಚಾರಿತ್ರ್ಯವಿರುವ ವ್ಯಕ್ತಿ ಮಾತ್ರ ಕುಲಪತಿಯಾಗಲು ಯೋಗ್ಯವೇ ಹೊರತು ಯಾವುದೇ ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ. ಕನಿಷ್ಠಪಕ್ಷ ನಾನು ಸಚಿವನಾಗಿರುವವರೆಗೂ ಅದು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ರಾಂಡಮ್ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಅನ್ ಲಾಕ್ ಹಂತದಲ್ಲೇ ಬಹಳಷ್ಟು ಜನರು ಹೊರಗೆ ಓಡಾಡುತ್ತಿದ್ದಾರೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾಲ್, ಥಿಯೇಟರ್, ಹೋಟೆಲ್ ಎಲ್ಲವನ್ನೂ ತೆರೆಯಲು ಅವಕಾಶ ನೀಡಿಲ್ಲ. ಆದರೂ ಕೈಗಾರಿಕೆಗೆ ಅವಕಾಶ ನೀಡಿರುವುದರಿಂದ ಜನರು ಹೊರಗೆ ಓಡಾಡುತ್ತಿರಬಹುದು. ಇದಕ್ಕೆ ಪೂರಕವಾಗಿ ಪರೀಕ್ಷೆ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು ಎಂದರು.
ಕೋವಿಡ್ ಮೂರನೇ ಅಲೆಗೆ ಸಿದ್ಧತೆಯಾಗಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ವಿಭಾಗ ಬಲಪಡಿಸಲಾಗುತ್ತಿದೆ. ಎಂದ ಅವರು ವೈದ್ಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದರೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆ ಕಡಿಮೆ. ವೈದ್ಯರು ನಗರಗಳಲ್ಲೇ ಆಯ್ಕೆ ಮಾಡಿಕೊಳ್ಳುತ್ತಾರೆ. ಹೆಚ್ಚಿನ ವೈದ್ಯರು ಹಳ್ಳಿಗಳಲ್ಲಿ ಕೆಲಸ ಮಾಡುವ ಛಲ ಹೊಂದಬೇಕು ಎಂದು ಡಾ. ಸುಧಾಕರ್ ಹೇಳಿದರು.
ಆಯುರ್ವೇದದಲ್ಲಿ ಹೆಚ್ಚು ಸಂಶೋಧನೆ ನಡೆಸಿ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

