ಮೈಸೂರು: ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರಿಗೆ ಕೃಷ್ಣರಾಜ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಮಂಗಳವಾರ ಉಚಿತವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಯಿತು.
ನಗರದ ಚಾಮುಂಡಿಪುರಂ, ವಿದ್ಯಾರಣ್ಯಪುರಂ, ನಂಜುಮಳಿಗೆ, ಸೇಂಟ್ ಮೇರಿಸ್ ವೃತ್ತ, ಫೈಲೆಟ್ ವೃತ್ತದಲ್ಲಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವ ನೂರಾರು ಮಂದಿ ವ್ಯಾಪಾರಸ್ಥರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ, ವ್ಯಾಪಾರದ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಬಳಸಿ ಸಾಮಾಜಿಕ ಅಂತರ ಕಾಪಾಡಿ, ನಿಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛತೆಯಿಂದ ಇರುವಂತೆ ನೋಡಿಕೊಂಡು ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ನಿಮ್ಮ ಜೀವ ಅಮೂಲ್ಯವಾದುದು ಎಂದು ಸಾರ್ವಜನಿಕರಿಗೂ ಮತ್ತು ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮಕ್ಕೆ ನಗರ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಜೋಗಿ ಮಂಜು ಚಾಲನೆ ನೀಡಿದರು.
ನಗರ ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್ ಈ ಸಂದರ್ಭದಲ್ಲಿ ಮಾತನಾಡಿ, ಕೋವಿಡ್ ಎಂಬ ಮಹಾಮಾರಿಯ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಾಯ ಅತ್ಯಮೂಲ್ಯ. ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರದಿಂದ ನೀಡುತ್ತಿರುವ ಕೋವಾಕ್ಸಿನ್, ಕೋವಿ ಶೀಲ್ಡ್ ಲಸಿಕೆಯನ್ನು ಕಡ್ಡಾಯವಾಗಿ ಪ್ರತಿಯೊಬ್ಬ ನಾಗರೀಕರು ತೆಗೆದುಕೊಳ್ಳಬೇಕು. ಹಾಗೆಯೇ ಸರ್ಕಾರದ ನಿಬಂಧನೆಯನ್ನು ಕಡ್ಡಾಯವಾಗಿ ಪಾಲಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಪಾಲಿಕೆ ಕೆ. ಆರ್. ಕ್ಷೇತ್ರದ ಅಧ್ಯಕ್ಷ ಶಿವಪ್ಪ, ನಗರ ಪ್ರಧಾನ ಕಾರ್ಯದರ್ಶಿ ಗೋಪಾಲ್, ಮಣಿರತ್ನಂ, ಕಾರ್ಯದರ್ಶಿ ಹರೀಶ್ ಅಂಕಿತ್, ನಿತಿನ ಅರಸ್, ಪುರುμÉೂೀತ್ತಮ್, ಸೋಮಶೇಖರ್, ರಾಕೇಶ್ ಇದ್ದರು.

