ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ನಾಯಕತ್ವ ಬಿಕ್ಕಟ್ಟಿಗೆ ತೆರೆ ಎಳೆಯಲು ಒಂದು ಗುಂಪು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿರುದ್ಧವೇ ಅತೃಪ್ತಿಯ ಹೊಗೆಯಾಡುತ್ತದೆ.
ರಾಜಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಿಕ್ಕಟ್ಟು ಶಮನಕ್ಕಾಗಿ ಬುಧವಾರ (ಜೂ. 16) ಸಂಜೆ ಬೆಂಗಳೂರಿಗೆ ಆಗಮಿಸುತ್ತಿರುವ ಅರುಣ್ ಸಿಂಗ್ ಅವರನ್ನು ಏರ್‍ಪೆÇೀರ್ಟ್‍ನಲ್ಲಿಯೇ ಓಲೈಸಲು ಸಿಎಂ ಬಿಎಸ್ ವೈ ನಿಷ್ಠರು ಸಿದ್ಧತೆ ಮಾಡಿಕೊಂಡಿದ್ದಾರೆಂಉ ತಿಳಿದು ಬಂದಿದೆ. ಒಂದೆಡೆ ಮುಖ್ಯಮಂತ್ರಿ ಬೆಂಬಲಿಗರ ಒತ್ತಡ, ಇನ್ನೊಂದೆಡೆ ಬಂಡಾಯ ಶಾಸಕರ ವರಸೆಯಿಂದ ಅಡಕತ್ತರಿಯಲ್ಲಿ ಸಿಲುಕಿರುವ ಅರುಣ್ ಸಿಂಗ್, ವರಿಷ್ಠರು ನೀಡಿರುವ ಸೂಚನೆ ಪಟ್ಟಿ ಇಟ್ಟುಕೊಂಡೇ ಎಲ್ಲ ಶಾಸಕರು, ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ ಎಂದು ಗೊತ್ತಾಗಿದೆ.
ಅರುಣ್ ಸಿಂಗ್ ಅವರನ್ನು ಓಲೈಸಲು ಅತೃಪ್ತರಲ್ಲದ ಶಾಸಕರು ಸಿದ್ಧತೆ ನಡೆಸಿದ್ದು, ಶಾಸಕ ರೇಣುಕಾಚಾರ್ಯ ಏನು ಮಾಡುತ್ತಾರೆಂಬ ಕುತೂಹಲ ಎಲ್ಲರದ್ದು.
ಮತ್ತೊಂದೆಡೆ ವಾರದಿಂದ ನಗರದ ಹೊರಗಿದ್ದ ಬಹುತೇಕ ಶಾಸಕರು ರಾಜಧಾನಿಗೆ ವಾಪಸ್ ಆಗುತ್ತಿದ್ದಾರೆ. ಇದೇ ವೇಳೆ ಕಳೆದ 3 ದಿನಗಳಿಂದ ದೆಹಲಿಯಲ್ಲಿ ಬಿಡಾರ ಹೂಡಿದ್ದ ಶಾಸಕ ಅರವಿಂದ ಬೆಲ್ಲದ್ ಕೂಡ ಅರುಣ್ ಸಿಂಗ್ ಬರುವುದಕ್ಕೆ ಮೊದಲೇ ವಾಪಸ್ ಬಂದಿದ್ದಾರೆ.
ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪನವರ ವಿರೋಧಿಗಳ ದೂರು ಹಾಗೂ ಸಿಎಂ ಆಪ್ತರ ಪ್ರತಿದೂರಿನಿಂದ ಹೈಕಮಾಂಡ್ ಈ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.
ಈ ಪೈಕಿ ಬಂಡಾಯ ಗುಂಪಿನಲ್ಲಿ ಗುರುತಿಸಿಕೊಂಡಿರುವ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕ ಬಸವಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಎಚ್.ವಿಶ್ವನಾಥ್, ಸುನೀಲ್ ಕುಮಾರ್ ಮುಂತಾದವರ ಜತೆ ಅರುಣ್ ಸಿಂಗ್ ಪ್ರತ್ಯೇಕ ಮಾತಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಏತನ್ಮಧ್ಯೆ ಹೆಚ್. ವಿಶ್ವನಾಥ್ ಅವರು, ಈ ಬಗ್ಗೆ ಹೊರಗೆ ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇನ್ನು ಅರುಣ್ ಸಿಂಗ್‍ಗೆ ಹೇಳಬೇಕಾದ್ದನ್ನು ಹೇಳುತ್ತೇನೆ ಎಂದಿದ್ದಾರೆ.
ಶಾಸಕರ ಅಭಿಪ್ರಾಯ ಆಲಿಸುವ ಮೊದಲೇ ಯಡಿಯೂರಪ್ಪ ಬದಲಾವಣೆ ಇಲ್ಲ ಎಂದು ಹೇಳಿದ್ದ ಅರುಣ್ ಸಿಂಗ್ ಬಗ್ಗೆ ಅರವಿಂದ ಬೆಲ್ಲದ್ ಸೇರಿ ಭಿನ್ನರ ಗುಂಪಿನ ಬಹುತೇಕ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿಗೆ ಶಾಸಕರ ಅಹವಾಲು ಕೇಳುವುದಕ್ಕೆ ಮೊದಲೇ ದಿಲ್ಲಿಯಲ್ಲಿ ಯಡಿಯೂರಪ್ಪ ಪರವಾಗಿ ಮಾತನಾಡಿದ್ದು ಸರಿಯಲ್ಲ. ಅವರಿಂದ ನಮಗೆ ನ್ಯಾಯ ಸಿಗಲಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಬೆಲ್ಲದ್ ಅವರಿಗೆ ಬಿ.ಎಲ್.ಸಂತೋμï ಸಮಾಧಾನಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿಯೇ ಬೆಲ್ಲದ್ ಉಸ್ತುವಾರಿ ಉಸಾಬರಿಯೇ ಇಲ್ಲದೆ ನೇರವಾಗಿ ವರಿಷ್ಠರನ್ನು ಭೇಟಿಯಾಗಿದ್ದಾರೆನ್ನಲಾಗಿದೆ.
ಮತ್ತೊಂದೆಡೆ; ಬಸನಗೌಡ ಯತ್ನಾಳ್, ತಿಪ್ಪಾರೆಡ್ಡಿ ಸಚಿವ ಯೋಗೇಶ್ವರ್ ಹಾಗೂ ಸುನೀಲ್ ಕುಮಾರ್ ಮುಂತಾದವರು ಸಿಂಗ್ ನಡೆಯ ಬಗ್ಗೆ ಕೆಂಡಕಾರಿದ್ದಾರೆ.
ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಮತ್ತು ಪ್ರಹ್ಲಾದ ಜೋಷಿ ಅವರನ್ನು ಅರುಣ್ ಸಿಂಗ್ ಅಭಿಪ್ರಾಯ ಸಂಗ್ರಹ ಮಾಡುವ ಸಮಯದಲ್ಲಿ ನಗರದಲ್ಲೇ ಇರುವಂತೆ ಸಿಎಂ ಬಣ ಕೇಳಿಕೊಂಡಿದೆ ಎಂದು ಗೊತ್ತಾಗಿದೆ.
ಈ ಹಿನ್ನೆಯಲ್ಲಿ ಈ ಇಬ್ಬರೂ ಸಚಿವರು ನಾಳೆಯಿಂದ ಮೂರು ದಿನ ರಾಜಧಾನಿಯಲ್ಲೇ ಉಳಿಯಲಿದ್ದಾರೆನ್ನಲಾಗಿದೆ. ಇವರಿಬ್ಬರೂ ಬಹಿರಂಗವಾಗಿಯೇ ಯಡಿಯೂರಪ್ಪ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಅರುಣ್ ಸಿಂಗ್ ರಾಜ್ಯ ಕೋರ್ ಕಮಿಟಿ ಸದಸ್ಯರ ಜತೆಯೂ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆಂಬ ಮಾಹಿತಿ ಸಿಕ್ಕಿದೆ ಹಾಗೂ ಸಂಘ ಪರಿವಾರದ ಪ್ರಮುಖರನ್ನು ಅವರು ಭೇಟಿಯಾಗಿ ರಾಜ್ಯ ರಾಜಕೀಯ ಕುರಿತು ಮಾತುಕತೆ ನಡೆಸಲಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಅರುಣ್ ಸಿಂಗ್ ವಿರುದ್ಧವೇ ಅತೃಪ್ತಿ ಹೊಗೆಯಾಡುತ್ತಿದೆ

