ಯಡಿಯೂರಪ್ಪರನ್ನು ಬದಲಿಸಿ; ಪಂಚಮಸಾಲಿ ಸಮುದಾಯದವರನ್ನು ಸಿಎಂ ಮಾಡಿ -ಹೆಚ್.ವಿಶ್ವನಾಥ್

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರನ್ನು ಬದಲಿಸಬೇಕೆಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ವಿಶ್ವನಾಥ್ ಮಾತನಾಡಿದರು.
ವೀರಶೈವ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಿ ಎಂದು ವಿಶ್ವನಾಥ್ ಹೇಳಿದರು.
ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮೂವರು ಶಾಸಕರಿದ್ದಾರೆ. ಮುರುಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್. ಈ ಮೂವರಲ್ಲಿ ಯಾರನ್ನಾದರೂ ಮುಖ್ಯಮಂತ್ರಿಯನ್ನಾಗಿ ಮಾಡಲಿ ಎಂದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಮೊದಲಿದ್ದ ಶಕ್ತಿ, ಸ್ಪಿರಿಟ್, ಆರೋಗ್ಯ ಈಗ ಇಲ್ಲ. ಹೀಗಾಗಿ ಕಾಮನ್ ಸೆನ್ಸ್ ಇರುವ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕುಟುಂಬ ರಾಜಕಾರಣ ರಾಕ್ಷಸ ರಾಜಕಾರಣ ಕಾಣುತ್ತಿದೆ. ಆಡಳಿತದಲ್ಲಿ ಕುಟುಂಬ ಹಸ್ತಕ್ಷೇಪ, ಭ್ರμÁ್ಟಚಾರ ಹೆಚ್ಚಾಗಿದೆ. ರಾಜ್ಯದಲ್ಲಿ ಭ್ರμÁ್ಟಚಾರ ಮಿತಿಮೀರಿದೆ ಎಂದು ಆರೋಪಿಸಿದರು.
ಯಡಿಯೂರಪ್ಪ ಪರ ಬ್ಯಾಟಿಂಗ್ ಬೀಸುತ್ತಿರುವ ಮಠಾಧೀಶರು ಬಸವಣ್ಣನವರ ತತ್ವ ಮರೆಯಬಾರದು ಎಂದು ಅವರು ಹೇಳಿದರು.
ಬಿಎಸ್ ಯಡಿಯೂರಪ್ಪನವರು ಈಗಾಗಲೇ ರಾಜೀನಾಮೆ ಬಗ್ಗೆ ಹೇಳಿದ್ದಾರೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆಗೆ ಸಿದ್ಧ ಎಂದಿದ್ದಾರೆ. ಹಾಗಾಗಿ ಯಡಿಯೂರಪ್ಪ ಮಾರ್ಗದರ್ಶಕರಾಗಿ ಇರಲಿ ಎಂದರು.
ನನಗೆ ಸಚಿವ ಸ್ಥಾನ ಸಿಗಲಿಲ್ಲ ಎಂದು ಈ ರೀತಿ ಹೇಳುತ್ತಿಲ್ಲ ಎಂದು ವಿಶ್ವನಾಥ್ ಹೇಳಿದರು.
ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಸರಿಯಾಗಿ ಜಾರಿ ಮಾಡುತ್ತಿಲ್ಲ ಎಂದು ಹೆಚ್. ವಿಶ್ವನಾಥ್ ದೂರಿದರು.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಇಂದು ಭೇಟಿಯಾಗಿ ಚರ್ಚಿಸಿದ್ದೇನೆ. ಬಿಎಸ್ ಯಡಿಯೂರಪ್ಪನವರ ರಾಜೀನಾಮೆಗೆ ಆಗ್ರಹಿಸಿ, ರಾಜ್ಯ ಬಿಜೆಪಿ ಬೆಳವಣಿಗೆಯ ಬಗ್ಗೆ ಅರುಣ್ ಸಿಂಗ್ ಬಳಿ ವಿವರಿಸಿದ್ದೇನೆ. ನನ್ನ ಹೇಳಿಕೆಯನ್ನು ಅವರು ಗಂಭೀರವಾಗಿ ಆಲಿಸಿದ್ದಾರೆಂದು ವಿಶ್ವನಾಥ್ ತಿಳಿಸಿದರು.