ಕೋವಿಡ್ 3ನೇ ಅಲೆ: ಪೆÇೀಷಕರು ಮಕ್ಕಳನ್ನು ಜಾಗೃತರಾಗಿ ನೋಡಿಕೊಳ್ಳಬೇಕು -ರೇಣುಕಾ ರಾಜ್

ಮೈಸೂರು: ಕೋವಿಡ್ ಮೂರನೇ ಅಲೆ ಮಕ್ಕಳಿಗೆ ವ್ಯಾಪಕ ಹರಡುವ ಸೂಚನೆ ಹಿನ್ನೆಲೆಯಲ್ಲಿ ಪೆÇೀಷಕರು ಮಕ್ಕಳನ್ನು ಜಾಗೃತರಾಗಿ ನೋಡಿಕೊಳ್ಳುವುದು ಆದ್ಯ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಾಜ್ಯ ನಿರ್ದೇಶಕಿ ರೇಣುಕಾ ರಾಜ್
ತಿಳಿಸಿದರು.
ಮೈಸೂರು ಯುವ ಬಳಗದ ವತಿಯಿಂದ ಮಾಸ್ಕ್ ದಿನಾಚರಣೆ ಅಂಗವಾಗಿ ಕೆ.ಆರ್.ಎಸ್. ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಕಾಲೋನಿಯಲ್ಲಿ ಮಕ್ಕಳಿಗೆ ಮಾಸ್ಕ್ ಹಾಕುವ ಮೂಲಕ ಮಾಸ್ಕ್ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ರೇಣುಕಾ ರಾಜ್ ಅವರು ಮಾತನಾಡಿದರು.
ಮಾಸ್ಕ್ ಧರಿಸುವುದು ಈಗಲೂ ಬಹುಮುಖ್ಯ. ಮಾಸ್ಕ್ ಧರಿಸಿ ಜೀವ ಉಳಿಸಿ. ಜಾಗತಿಕ ಸಮುದಾಯಗಳ ಮೇಲೆ ಕೋವಿಡ್ ಪರಿಣಾಮ ಬೀರುತ್ತಿದೆ. ಸೋಂಕು ಹರಡುವಿಕೆ ತಡೆಗೆ ಮಾಸ್ಕ್ ಧರಿಸಿ, ಕೈಗಳನ್ನು ತೊಳೆಯುತ್ತಿರಿ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳಿ ಎಂದು ಅವರು ತಿಳಿಸಿದರು.
ಕರ್ನಾಟಕ ಸರ್ಕಾರ ಮಾಸ್ಕ್ ಅಭಿಯಾನ ನಡೆಸಿ, ಶೇ 99ರಷ್ಟು ಯಶಸ್ಸು ಕಂಡಿದೆ. ಮನೆಯಿಂದ ಹೊರ ಬಂದಾಗ ಮಾಸ್ಕ್ ಹಾಕಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.
ಬಿಜೆಪಿ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗರತ್ನ ಗೌಡ, ಮೈಸೂರು ಯುವ ಬಳಗದ ಅಧ್ಯಕ್ಷ ನವೀನ್, ಪಾಪಣ್ಣ ಹಾಗೂ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.