ವೈದ್ಯರ ಮೇಲೆ ಹಲ್ಲೆ ನಡೆಸುವರ ವಿರುದ್ಧ ಎಫ್ ಐಆರ್ ದಾಖಲಿಸಲು ಕೇಂದ್ರ ಸರ್ಕಾರ ಸೂಚನೆ

ನವದೆಹಲಿ:  ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಎಫ್ಐಆರ್‌ ದಾಖಲಿಸಲು ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚಿಸಿದೆ.

ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ದೇಶದ ಹಲವೆಡೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.

ಆರೋಗ್ಯ ವೃತ್ತಿಪರರ ಮೇಲೆ ಹಲ್ಲೆ ನಡೆಸುವವ ಹಲ್ಲೆಕೋರರ ವಿರುದ್ಧದ ಎಫ್ ಐಆರ್ ದಾಖಲಿಸಬೇಕು,. ಇಂತಹ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆಗೊಳಪಡಿಸಬೇಕು. ಸಾಂಕ್ರಾಮಿಕ ಕಾಯಿಲೆಗಳ (ತಿದ್ದುಪಡಿ) ಕಾಯ್ದೆ 2020ರ ಅನ್ವಯ ಅವರಿಗೆ ಶಿಕ್ಷೆ ಕೊಡಿಸಬಹುದಾಗಿದೆ.

ಈ ಕಾನೂನಿನ ಪ್ರಕಾರ, ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ 5 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ. ಒಂದು ವೇಳೆ ಕರ್ತವ್ಯ ನಿರತ ವೈದ್ಯರ ಮೇಲೆ ಹಿಂಸೆಯಂತಹ ಘಟನೆ ನಡೆದರೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೂ ದಂಡ ವಿಧಿಸಬಹುದಾಗಿದೆ.