ಬೆಂಗಳೂರು: ಡೆಲ್ಟಾ ಪ್ಲಸ್ ವೈರಸ್ ಮೈಸೂರಲ್ಲಿ ಒಬ್ಬರಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಆ ರೋಗಿಯನ್ನ ಐಸೋಲೇಟ್ ಮಾಡಲಾಗಿದೆ. ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾದ ವ್ಯಕ್ತಿಯಲ್ಲಿ ಯಾವುದೇ ರೋಗ ಲಕ್ಷ್ಮಣ ಇಲ್ಲ. ಆತನ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿ ಇರೋರಿಗೆ ಸೋಂಕು ಹರಡಿಲ್ಲ. ಸೋಂಕಿತನ ಸಂಪರ್ಕದಿಂದ ಇದು ಬಂದಿಲ್ಲ. ಡೆಲ್ಟಾ ಪ್ಲಸ್ ವೈರಸ್ ಸೂಕ್ಷ್ಮವಾಗಿ ಗಮನಿಸಿದ್ದೇವೆ ಎಂದು ಡಾ. ಸುಧಾಕರ್ ಹೇಳಿದರು.
ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. 6 ಲ್ಯಾಬ್ ಕರ್ನಾಟಕದಲ್ಲಿ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಡಾ. ಸುಧಾಕರ ಮಾಹಿತಿ ನೀಡಿದರು.
ಡೆಲ್ಟಾ ಪ್ಲಸ್ ರೂಪಾಂತರ ಕಂಡುಬರುವ ಜಿಲ್ಲೆಗಳು ಮತ್ತು ಕ್ಲಸ್ಟರ್ಗಳಲ್ಲಿ ತಕ್ಷಣದ ನಿಯಂತ್ರಣ ಕ್ರಮಗಳು, ವರ್ಧಿತ ಪರೀಕ್ಷೆ, ಟ್ರ್ಯಾಕಿಂಗ್ ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವಂತೆ ಕೇಂದ್ರವು ರಾಜ್ಯಗಳಿಗೆ ನಿರ್ದೇಶನ ನೀಡಿದೆ ಎಂದವರು ತಿಳಿಸಿದರು.
ಮೈಸೂರಲ್ಲಿ ಒಬ್ಬರಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆ – ಸಚಿವ ಡಾ.ಕೆ.ಸುಧಾಕರ್

