ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಹೆಚ್. ವಿಶ್ವನಾಥ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಬೇರೆ ಪಕ್ಷದಿಂದ ಬಂದ ಸಿದ್ಧರಾಮಯ್ಯನವರಿಗೆ ಈಗಾಗಲೇ ಮುಖ್ಯಮಂತ್ರಿ ಸ್ಥಾನ ಕೊಟ್ಟಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್ ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದಾರೆ ಅವರಿಗೆ ಅವಕಾಶ ನೀಡಬೇಕು ಎಂದಿದ್ದಾರೆ ವಿಶ್ವನಾಥ್.
ಬೇರೆ ಪಕ್ಷದಿಂದ ಬಂದ ಸಿದ್ಧರಾಮಯ್ಯಗೆ ಈಗಾಗಲೇ ಸಿಎಂ ಸ್ಥಾನ ಕೊಟ್ಟಾಗಿದೆ. ಡಿ.ಕೆ ಶಿವಕುಮಾರ್ ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿದ್ದಾರೆ. ಅವರಿಗೆ ಅವಕಾಶ ನೀಡಬೇಕು. ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಇದ್ದಾರೆ ಎಂದು ವಿಶ್ವನಾಥ್ ತಿಳಿಸಿದರು.
ಸಿದ್ದರಾಮಯ್ಯನವರಿಗೆ ಕ್ಷೇತ್ರ ಹುಡುಕುವಂತಹ ದುಸ್ಥಿತಿ ಬರಬಾರದಿತ್ತು ಎಂದಿರುವ ಹೆಚ್.ವಿಶ್ವನಾಥ್, ಮುಖ್ಯಮಂತ್ರಿ ಆಗಿದ್ದವರೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಚುನಾವಣೆಗೆ ಹೋದರೆ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲಲಿದೆ ಎಂದು ಅವರ ಶಿಷ್ಯಂದಿರು ಹೇಳುತ್ತಿದ್ದಾರೆ. ಅಧಿಕಾರಕ್ಕೆ ಬರುವುದಿರಲಿ ನಿಮ್ಮ ನಾಯಕನಿಗೆ ಯಾವ ಕ್ಷೇತ್ರ ಇದೆ ಎಂದು ವಿಶ್ವನಾಥ್ ಪ್ರಶ್ನಿಸಿದರು.
ಈಗ ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಹೋದರೆ 150 ಸ್ಥಾನ ಬರುತ್ತದೆ ಎನ್ನುವವರು 2018ರ ಚುನಾವಣೆಯಲ್ಲಿ ಕಾಂಗ್ರೆಸ್ 132 ಸ್ಥಾನದಿಂದ 70 ಸ್ಥಾನಕ್ಕೆ ಏಕೆ ಬಂದಿತು? ಏಕೆ ಎಂದರು.
ಸಿದ್ದುಗೆ ವಿಶ್ವನಾಥ್ ಕಿವಿ ಮಾತು
ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ನೀವು ಶಾಸಕ ಜಮೀರ್ ಅಹಮ್ಮದ್ ಅವರನ್ನು ಮುಂದಿಟ್ಟುಕೊಂಡು ಹೋಗಬೇಡಿ. ಇದರಿಂದ ನಿಮಗೆ ಒಳ್ಳೆಯದಾಗುವುದಿಲ್ಲ ಎಂದು ವಿಶ್ವನಾಥ್ ಸಿದ್ದರಾಮಯ್ಯನವರಿಗೆ ಕಿವಿಮಾತು ಹೇಳಿದರು.

