ಸಾರಿಗೆ ನೌಕರರು ಮುಷ್ಕರ ನಡೆಸುವಂತಿಲ್ಲ: ಆದೇಶ ಹೊರಡಿಸಿದ ಸರಕಾರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸುವಂತಿಲ್ಲ ಎಂದು ಸರಕಾರ ಆದೇಶ ಹೊರಡಿಸಿದೆ.

ರಾಜ್ಯದ ನಾನಾ ಸಾರಿಗೆ ಸಂಸ್ಥೆಗಳ ನೌಕರರು ಮತ್ತೆ ಮುಷ್ಕರ ಮಾಡಲು ಮುಂದಾಗಿದ್ದಾರೆ ಎಂಬ ಸುಳಿವು ಸರ್ಕಾರಕ್ಕೆ ಸಿಕ್ಕ ಹಿನ್ನೆಲೆಯಲ್ಲಿ ಸರಕಾರ ಸಾರಿಗೆ ನೌಕರರು ಮುಷ್ಕರ ನಡೆಸಲು ನಿಷೇಧ ಹೇರಿದೆ.
ಜುಲೈ 5ರ ಬಳಿಕ ಸಾರಿಗೆ ನೌಕರರು ಮತ್ತೆ ರಸ್ತೆಗೆ ಇಳಿಯಲಿದ್ದಾರೆ ಎನ್ನಲಾಗಿದೆ. ಇದನ್ನರಿತು ಮುಷ್ಕರಕ್ಕೆ ನಿರ್ಧರಿಸಿದ್ದ ಸಾರಿಗೆ ಸಿಬ್ಬಂದಿಗೆ ಬ್ರೇಕ್ ಹಾಕಲು ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ಸರ್ಕಾರದಿಂದ ಆದೇಶ ಹೊರಬಿದ್ದಿದೆ.

ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸಲು ನಿಷೇಧ
ಇದೇ ಜು. 1ರಿಂದ ಡಿ. 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧ ಮಾಡಲಾಗಿದೆ. ಆರ್ಥಿಕತೆಯ ಮೇಲೆ ಕೊವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ. ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3
ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲಾಕ್ಡೌನ್ ಮುಗಿದ ನಂತರ ಸಾರಿಗೆ ನೌಕರರು ಜು. 5ರ ನಂತರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಸರಕಾರ ಅದಕ್ಕೂ ಮೊದಲೇ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ.