ರಾಜಭವನಕ್ಕೆ ರೈತರಿಂದ ಮುತ್ತಿಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಶನಿವಾರ ರಾಜಭವನ ಚಲೋ ನಡೆಸಿದರು.

ರಾಜಭವನ ಚಲೋ ಕೈಗೊಂಡಿದ್ದ ರೈತರು ಮೆರವಣಿಗೆ ಮೂಲಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು.

ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾ ನಿರತ ರೈತರು ತಿಳಿಸಿದ್ದಾರೆ.