ಮೈಸೂರು: ಲಾಕ್ ಡೌನ್ ನಿರ್ಬಂಧ ಸಡಿಲಿಸಿದ್ದರಿಂದ ಸೋಮವಾರದಿಂದ ಮೈಸೂರು ನಗರ ಹಾಗೂ ಗ್ರಾಮಾಂತರ ಬಸ್ ಗಳ ಸಂಚಾರ ಪುನರಾರಂಭ ಹಿನ್ನೆಲೆಯಲ್ಲಿ ನಗರದ ಸಬರ್ಬ್ ಬಸ್ ನಿಲ್ದಾನದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರಯಾಣಿಕರಿಗೆ ಉಚಿತವಾಗಿ 1 ಸಾವಿರ ಮಾಸ್ಕ್ ಮತ್ತು ಗುಲಾಬಿ ನೀಡಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕೊರೊನಾದಿಂದ ದೂರವಿರಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂಬ ಸಂದೇಶದೊಂದಿಗೆ ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಬಿಜೆಪಿ ನಗರ ಯುವ ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಮರಿಯಪ್ಪ ,ದುರ್ಗಾಪ್ರಸಾದ್ ,ಎಸ್ ಎನ್ ರಾಜೇಶ್, ಜಿ. ರಾಘವೇಂದ್ರ ಹಾಗೂ ಇನ್ನಿತರರು ಇದ್ದರು.

