ದಾವಣಗೆರೆ: ಬಿಜೆಪಿ ಸರ್ಕಾರ ಲಂಚದಲ್ಲಿ ಮುಳುಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿದ್ದರಾಮಯ್ಯ ಶುಕ್ರವಾರ ಮಾತನಾಡಿದರು.
ಬಿಜೆಪಿ ಸರ್ಕಾರ 20, 25 ಪರ್ಸೆಂಟೆಜ್ ಸರ್ಕಾರ ಎಂದು ಆರೋಪಿಸಿದ ಸಿದ್ದರಾಮಯ್ಯ, ಈ ಸರ್ಕಾರದದಲ್ಲಿ ಲಂಚ ಇಲ್ಲದೇ ಏನು ನಡೆಯಲ್ಲ ಎಂದರು.
ಸಿಎಂ ಪುತ್ರ ವಿಜಯೇಂದ್ರ ಡಿಪ್ಯಾಕ್ಟರ್ ಸಿಎಂ ಆಗಿದ್ದಾರೆ. ಯಡಿಯೂರಪ್ಪ ದಿ ಜೀರೋ ಸಿಎಂ ಆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಯಡಿಯೂರಪ್ಪನವರ ಮಗ ಹಾಗೂ ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಇದೆ. ಯಡಿಯೂರಪ್ಪ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸಿದ್ದರಾಮಯ್ಯನವರು ದೂರಿದರು.
ಭ್ರಷ್ಟಾಚಾರ ಆರೋಪದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರ ಆಪ್ತ ಬಂಧನವಾಗಿದ್ದು, ಯಡಿಯೂರಪ್ಪ ಅವರ ಮಗ ಕಂಪ್ಲೆಂಟ್ ಮಾಡಿದ್ದಾರೆ. ಸರ್ಕಾರದ ಯೋಜನೆಗಳು, ಪ್ರಾಜೆಕ್ಟ್ ಗಳನ್ನು ಸಹಿ ಹಾಕಿಸಲು ಹಣ ಪಡೆಯುತ್ತಿದ್ದ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯನವರು ಆಗ್ರಹಿಸಿದರು.
ನಮ್ಮ ಪಕ್ಷದಲ್ಲಿ ಜಗಳವಿಲ್ಲ
ನಮ್ಮ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ನಾವೆಲ್ಲ ಒಟ್ಟಾಗಿ ಇದ್ದೇವೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಹೊಸದಾಗಿ ಆಯ್ಕೆಯಾದ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ಅವರು ಹೇಳಿದರು.

