ಮೈಸೂರು ರೈಲ್ವೆ ಮತ್ತು ವಿಮಾನ ನಿಲ್ದಾಣಕ್ಕೆ ಮೈಸೂರು ರಾಜರ ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ

ಮೈಸೂರು: ಮೈಸೂರು ರೈಲ್ವೆ ನಿಲ್ದಾಣಕ್ಕೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ಜಂಕ್ಷನ್ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದಾರೆ.

ಮೈಸೂರು ವಿಮಾನ ನಿಲ್ದಾಣವನ್ನು ಶ್ರೀ ಜಯಚಾಮರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ವಿಮಾನಯಾನ ಸಚಿವ ಹರದೀಪ್ ಸಿಂಗ್ ಪುರಿ ಅವರಲ್ಲಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.