ಕೋವಿಡ್-19 ನಿರ್ಬಂಧ: ಜನರಿಗೆ ಇನ್ನಷ್ಟು ರಿಲ್ಯಾಕ್ಸ್

ನೈಟ್ ಕರ್ಫ್ಯೂ ಮುಂದುವರಿಕೆ, ಮಾಲ್ ಆರಂಭ; ಪಬ್ಗಳು ಓಪೆನ್ ಇಲ್ಲ, ಬಾರ್ಗಳಿಗೆ ಅವಕಾಶ: ಅನ್ಲಾಕ್ 3.0ದಲ್ಲೂ ಚಿತ್ರಮಂದಿರಗಳ ಬಂದ್
ಬೆಂಗಳೂರು: ಅನ್ಲಾಕ್ 3.0 ನಿಮಿತ್ತ ರಾಜ್ಯ ಸರಕಾರ ಇನ್ನಷ್ಟು ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ವಾರಾಂತ್ಯದ ಕರ್ಫ್ಯೂವನ್ನು ತೆಗೆದು ಹಾಕಲಾಗಿದ್ದು, ನೈರ್ಟ್ ಕರ್ಫ್ಯೂವನ್ನು ಉಳಿಸಿಕೊಳ್ಳಲಾಗಿದೆ.
ಹೊಸ ಕ್ರಮಗಳು ಸೋಮವಾರ (ಮೇ 5) ರಿಂದ ಈ ತಿಂಗಳ 19ರವರೆಗೂ ಜಾರಿಯಲ್ಲಿರುತ್ತವೆ.

ಅನ್ಲಾಕ್ ಮುಖ್ಯಾಂಶಗಳು ಹೀಗಿವೆ:

  1. ಸರಕಾರಿ ಮತ್ತು ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
  3. ನಮ್ಮ ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವಾಲಯ, ಮಸೀದಿ, ಚರ್ಚ್ ಜನರಿಗೆ ಮುಕ್ತ.
  5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ.
  6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
  7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ.
  8. ಅಂತ್ಯ ಸಂಸ್ಕಾರಕ್ಕೆ 20 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
  9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  10. ಇನ್ನು ಮುಂದೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ.
  11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
  12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
  13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
  14. ಚಿತ್ರಮಂದಿರಗಳು ಆರಂಭ ಇಲ್ಲ.

• ಜಿಲ್ಲೆಯಲ್ಲಿರುವ ಪರಿಸ್ಥಿತಿಗೆ ಅನುನುಗುಣವಾಗಿ ಆಯಾ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ.

• ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರಕಾರದ ಮಾರ್ಗಸೂಚಿ ಪಾಲಿಸಬೇಕೆಂದು ಸರಕಾರ ಸೂಚಿಸಿದೆ.