ದಾವಣಗೆರೆ: ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞ ರ ವರದಿಗಳಿವೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ತಿಳಿದರು.
ದಾವಣಗೆರೆಯಲ್ಲಿ ಸಚಿವರು ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಎಂದು ತಜ್ಞರು ವರದಿಯಲ್ಲಿ ಹೇಳಿದ್ದಾರೆ. ಹಾಗೆಂದು ಯಾವ ಪೋಷಕರು ಮೈಮರೆಯುವಂತಿಲ್ಲ, ಅನ್ ಲಾಕ್ ಆಗಿದೆ ಎಂದು ಯಾರು ಮೈಮೆರಯುವಂತಿಲ್ಲ, ಎರಡನೇ ಡೋಸ್ ಪಡೆಯುವವರೆಗೂ ಎಲ್ಲರೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.
ಈಗಾಗಲೇ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಕೇರಳದಲ್ಲಿ ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಕೇಸ್ ಬರುತ್ತಿದೆ ಎಂದರು.
ಈ ಹಿನ್ನಲೆಯಲ್ಲಿ ಕರ್ನಾಟಕದ ಗಡಿಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕರ್ನಾಟಕದಲ್ಲಿ ಕೇಸ್ ಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಶೇ. 1.5ರ ದರದಲ್ಲಿ ಕೇಸ್ ಗಳು ದಾಖಲಾಗುತ್ತಿವೆ. ಪ್ರತಿದಿನ 1.50 ಲಕ್ಷದಷ್ಟು ಟೆಸ್ಟಿಂಗ್ ಮಾಡುತ್ತಿದ್ದೇವೆ. ಸಧ್ಯ ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣದಲ್ಲಿದೆ ಎಂದು ಡಾ. ಸುಧಾಕರ್ ಹೇಳಿದರು.

