ಮೈಸೂರು, ಜು. 11- ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದವರಿಗೆ ಪ್ರಾಣ ಬೆದರಿಕೆ ಇದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ಬಡಗಲಪುರ ನಾಗೇಂದ್ರ ಅವರು ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕೆ.ಅರ್.ಎಸ್. ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧದ ಬಗ್ಗೆ ಹಲವುಬಾರಿ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.
ಗಣಿಗಾರಿಕೆ ಯಿಂದ ಮುಂದೆ ಕೆ.ಅರ್.ಎಸ್. ಡ್ಯಾಂ ಗೆ ಅಪಾಯ ಇದೆ. ಕುಮಾರಸ್ವಾಮಿ ಹಾಗೂ ಜೆ ಡಿ ಎಸ್ ಶಾಸಕರು ಈ ಬಗ್ಗೆ ಯೋಚನೆ ಮಾಡಬೇಕು ಎಂದರು.
ಅಕ್ರಮ ಗಣಿಗಾರಿಕೆ ಸಕ್ರಮ ಗಣಿಗಾರಿಕೆ ಅಲ್ಲ. ಸಂಪೂರ್ಣ ಗಣಿಗಾರಿಕೆ ನಿಷೇಧ ಆಗಬೇಕು ಎಂದು ಅವರು ಆಗ್ರಹಿಸಿದರು.

