ಕರ್ನಾಟಕದ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ಭಾನುವಾರ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ರಾಜ್ಯಪಾಲರಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ. ಎಸ್ . ಓಕಾ ಪ್ರತಿಜ್ಞಾವಧಿ ಬೋಧಿಸಿದರು.

ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ ಎಸ್ . ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಅಶ್ವಥ್ ನಾರಾಯಣ್, ಸಚಿವ ಸುಧಾಕರ್, ಆರ್. ಶಂಕರ್, ಮುರುಗೇಶ್ ನಿರಾಣಿ, ಕೇಂದ್ರ ಸಚಿವ ರಾಮ್ ದಾಸ್ ಅಠವಾಳೆ, ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಸಂಪುಟ ಸಚಿವರುಗಳು ನೂತನ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಗೆ ಶುಭಾಶಯ ಸಲ್ಲಿಸಿದರು.